ಮಡಿಕೇರಿ, ಜು. ೨೦: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಗಳಾದ ಡಾ. ರೇಣುಕಾ ಪ್ರಸಾದ್ ಕೆ.ವಿ. ಅವರ ಆಡಳಿತದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆ.ವಿ.ಜಿ. ಐ.ಟಿ.ಐ. ಭಾಗಮಂಡಲದಲ್ಲಿ, ಕೆ.ವಿ.ಜಿ. ವಿದ್ಯಾ ಸಂಸ್ಥೆಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಉಜ್ವಲ್ ಊರುಬೈಲು ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮಾತನಾಡಿ, ಭಾಗಮಂಡಲ ಐ.ಟಿ.ಐ.ಯ ಅಭಿವೃದ್ಧಿಗೆ ಸಂಬAಧಿಸಿದAತೆ ಸಲಹೆ ಸೂಚನೆಗಳನ್ನು ನೀಡಿದರು. ವಿದ್ಯಾರ್ಥಿಗಳಿಗೆ ಪ್ಲೇಸ್‌ಮೆಂಟ್‌ನ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಪ್ಲೇಸ್ ಮೆಂಟ್ ತರಬೇತಿ ಕಾರ್ಯಾ ಗಾರವನ್ನು ಕಾಲೇಜಿನಲ್ಲಿ ಆಯೋಜಿಸಿ, ವಿವಿಧ ಸಂಸ್ಥೆಗಳಿAದ ಪ್ಲೇಸ್‌ಮೆಂಟ್‌ಗಳನ್ನು ನಡೆಸುವ ಮೂಲಕ, ಇಲ್ಲಿ ಶಿಕ್ಷಣ ಪಡೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಒಳ್ಳೆಯ ಉದ್ಯೋಗವನ್ನು ಪಡೆಯಲು ಕಾಲೇಜಿನ ಸಿಬ್ಬಂದಿಗಳು ಹೆಚ್ಚಿನ ಮುತುವರ್ಜಿ ವಹಿಸಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭ ಸಂಸ್ಥೆಯ ಪ್ರಾಂಶುಪಾಲ ಶ್ರೀಕಾಂತ್ ಕುಡೆಕಲ್ಲು, ಎ.ಒ.ಎಲ್.ಇ ಸುಳ್ಯ ಇದರ ಆಡಳಿತಾಧಿಕಾರಿ ಪ್ರಸನ್ನ ಕಲ್ಲಾಜೆ ಮತ್ತು ಕಾಲೇಜಿನ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು.