ಗೋಣಿಕೊಪ್ಪಲು, ಜು. ೨೧: ಭಾರತ ದೇಶದ ೧೫ನೇ ರಾಷ್ಟçಪತಿಯಾಗಿ ದ್ರೌಪದಿ ಮುರ್ಮು ಆಯ್ಕೆಯಾದ ಹಿನ್ನೆಲೆಯಲ್ಲಿ ಗೋಣಿಕೊಪ್ಪ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಸುರೇಶ್ ರೈ ಮುಂದಾಳತ್ವದಲ್ಲಿ ಪಟ್ಟಣದಲ್ಲಿ ವಿಜಯೋತ್ಸವ ನಡೆಯಿತು.
ಪಟ್ಟಣದಲ್ಲಿ ಜಮಾವಣೆಗೊಂಡ ಬಿಜೆಪಿ ಪಕ್ಷದ ಪ್ರಮುಖರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ವೇಳೆ ಮಾತನಾಡಿದ ಪಕ್ಷದ ಪ್ರಮುಖರಾದ ಬಿ.ಎನ್. ಪ್ರಕಾಶ್ ಹಾಗೂ ಕೊಣಿಯಂಡ ಬೋಜಮ್ಮ ರಾಷ್ಟçದಲ್ಲಿ ಅತ್ಯುನ್ನತ ಸ್ಥಾನದ ರಾಷ್ಟçಪತಿ ಸ್ಥಾನವನ್ನು ಆದಿವಾಸಿ ಮಹಿಳೆಗೆ ನೀಡುವ ಮೂಲಕ ಬಡಜನರಿಗೆ ಪಕ್ಷದಲ್ಲಿ ಉತ್ತಮ ಸ್ಥಾನ ನೀಡಲಿದೆ ಎಂಬ ಸಂದೇಶ ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ ಎಂದರು.
ವಿಜಯೋತ್ಸವದಲ್ಲಿ ಶಕ್ತಿ ಕೇಂದ್ರದ ಸಹ ಪ್ರಮುಖ್ ಅಬ್ದುಲ್ ಜಲೀಲ್, ಗ್ರಾ.ಪಂ. ಅಧ್ಯಕ್ಷೆ ಚೈತ್ರ, ಪಕ್ಷದ ಪ್ರಮುಖರಾದ ಕೆ. ರಾಜೇಶ್, ಮನ್ನಕ್ಕಮನೆ ಸೌಮ್ಯಬಾಲು, ರಾಣಿ ನಾರಾಯಣ್, ರಾಮಕೃಷ್ಣ, ವಿವೇಕ್ ರಾಯ್ಕರ್, ಪುಷ್ಪಾ, ಮಂಜು, ಶ್ರೀನಿ, ಮತ್ತಿತರು ಹಾಜರಿದ್ದರು.
ಕುಶಾಲನಗರ: ರಾಷ್ಟçಪತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಗೆಲುವಿನ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.
ಬಿಜೆಪಿ ನಗರಾಧ್ಯಕ್ಷ ಉಮಾ ಶಂಕರ್ ನೇತೃತ್ವದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಜಯವರ್ಧನ್ ಸೇರಿದಂತೆ ಸ್ಥಳೀಯ ಪ್ರತಿನಿಧಿಗಳು, ಬಿಜೆಪಿ ಪದಾಧಿಕಾರಿಗಳು ಕಾರ್ಯಕರ್ತರು ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು.