ಮುಳ್ಳೂರು, ಜು. ೨೦: ಕರ್ನಾಟಕ ರಾಜ್ಯ ಶಿಕ್ಷಕರ ಪರಿಷತ್ ಮೈಸೂರು ಇವರ ವತಿಯಿಂದ ನೀಡಲಾಗುವ ‘ಶಿಕ್ಷಣ ಸಾರಥಿ ೨೦೨೧-೨೨’ ಸಾಲಿನ ರಾಜ್ಯಮಟ್ಟದ ಉತ್ತಮ ಸಿ.ಆರ್.ಪಿ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಮೂವರು ಕ್ಲಸ್ಟರ್ ಸಿ.ಆರ್.ಪಿಗಳು ಆಯ್ಕೆಗೊಂಡಿದ್ದಾರೆ.
ಸೋಮವಾರಪೇಟೆ ತಾಲೂಕಿನಿಂದ ಶನಿವಾರಸಂತೆ ಕ್ಲಸ್ಟರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿ ಆಗಿ ಕಾರ್ಯನಿರ್ವಹಿಸುತ್ತಿರುವ ಸಿ.ಕೆ. ದಿನೇಶ್, ವೀರಾಜಪೇಟೆ ತಾಲೂಕಿನಿಂದ ಅಮ್ಮತ್ತಿ-ಒಂಟಿಅAಗಡಿ ಕ್ಲಸ್ಟರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಕೆ. ಸುಷ ಮತ್ತು ಮಡಿಕೇರಿ ತಾಲೂಕಿನಿಂದ ಮಡಿಕೇರಿ ಕ್ಲಸ್ಟರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬಿ.ಬಿ. ಸರಸ್ವತಿ ಇವರುಗಳು ಶಿಕ್ಷಣ ಸಾರಥಿ ೨೦೨೧-೨೨ ಸಾಲಿನ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ತಾ. ೨೪ ರಂದು ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ನಡೆಯಲಿರುವ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.