ಸೋಮವಾರಪೇಟೆ, ಜು. ೨೧: ಜಿಲ್ಲೆಯಲ್ಲಿ ಕಳೆದ ೨೫ ವರ್ಷಗಳಿಂದ ಬಿಜೆಪಿ ಆಡಳಿತದಲ್ಲಿದ್ದು, ಜಿಲ್ಲೆಯ ಅಭಿವೃದ್ಧಿ ಮರೀಚಿಕೆಯಾಗಿದೆ. ಈ ದುರಾಡಳಿತಕ್ಕೆ ಕಾಂಗ್ರೆಸ್‌ನಿAದ ಮಾತ್ರ ಕೊನೆ ನೀಡಲು ಸಾಧ್ಯ. ಈ ನಿಟ್ಟಿನಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ಕೆಪಿಸಿಸಿ ಉಪಾಧ್ಯಕ್ಷ ವಿನಯ್‌ಕುಮಾರ್ ಸೊರಕೆ ಹೇಳಿದರು.

ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಲ್ಲಿನ ಸಫಾಲಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ ೨೫ ವರ್ಷಗಳಿಂದ ಕೊಡಗಿನ ಅಭಿವೃದ್ಧಿ ನಿಂತ ನೀರಾಗಿದೆ. ಇದನ್ನು ಬದಲಾಯಿಸಬೇಕಾದರೆ ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಮವಾರಪೇಟೆ, ಜು. ೨೧: ಜಿಲ್ಲೆಯಲ್ಲಿ ಕಳೆದ ೨೫ ವರ್ಷಗಳಿಂದ ಬಿಜೆಪಿ ಆಡಳಿತದಲ್ಲಿದ್ದು, ಜಿಲ್ಲೆಯ ಅಭಿವೃದ್ಧಿ ಮರೀಚಿಕೆಯಾಗಿದೆ. ಈ ದುರಾಡಳಿತಕ್ಕೆ ಕಾಂಗ್ರೆಸ್‌ನಿAದ ಮಾತ್ರ ಕೊನೆ ನೀಡಲು ಸಾಧ್ಯ. ಈ ನಿಟ್ಟಿನಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ಕೆಪಿಸಿಸಿ ಉಪಾಧ್ಯಕ್ಷ ವಿನಯ್‌ಕುಮಾರ್ ಸೊರಕೆ ಹೇಳಿದರು.

ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಲ್ಲಿನ ಸಫಾಲಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ ೨೫ ವರ್ಷಗಳಿಂದ ಕೊಡಗಿನ ಅಭಿವೃದ್ಧಿ ನಿಂತ ನೀರಾಗಿದೆ. ಇದನ್ನು ಬದಲಾಯಿಸಬೇಕಾದರೆ ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಚುನಾವಣೆಯನ್ನು ಎದುರಿಸಲು ಎಲ್ಲಾ ರೀತಿಯಲ್ಲು ಸಿದ್ಧವಾಗಿರಬೇಕು. ಚುನಾವಣೆ ಸಂದರ್ಭ ಇವಿಎಂ ದುರ್ಬಳಕೆ ತಡೆಗಟ್ಟಲು ಕಾರ್ಯ ಕರ್ತರು ಸಿದ್ಧರಿರಬೇಕು ಎಂದರು.

ಸ್ವಾತಂತ್ರö್ಯದ ಅಮೃತ ಮಹೋತ್ಸವ, ಸಿದ್ದರಾಮಯ್ಯ ಅವರ ೭೫ನೇ ಜನ್ಮ ದಿನಾಚರಣೆ ಉತ್ಸವ ಸೇರಿದಂತೆ ಪ್ರಮುಖ ಕಾರ್ಯ ಕ್ರಮಗಳನ್ನು ಕಾಂಗ್ರೆಸ್ ಪಕ್ಷದಿಂದ ಆಯೋಜಿಸ ಲಾಗಿದೆ ಎಂದು ಮಾಹಿತಿ ನೀಡಿದರು.ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಅಧ್ಯಕ್ಷ ಕೆ.ಕೆ. ಮಂಜುನಾಥ್, ಬ್ಲಾಕ್ ಅಧ್ಯಕ್ಷ ಬಿ.ಬಿ. ಸತೀಶ್, ಮುಖಂಡರಾದ ಚಂದ್ರಮೌಳಿ, ಬಿ.ಎ. ಜೀವಿಜಯ, ಡಾ. ಮಂಥರ್ ಗೌಡ, ಕೆ.ಎಂ ಲೋಕೇಶ್, ಟಿ.ಪಿ. ರಮೇಶ್, ಬಿ.ಇ. ಜಯೇಂದ್ರ, ಕೆ.ಎ. ಯಾಕೂಬ್, ಯುವ ಕಾಂಗ್ರೆಸ್‌ನ ಹೆಚ್.ವಿ. ಮಿಥುನ್, ಕೊಲ್ಯದ ಗಿರೀಶ್, ಜನಾರ್ಧನ್, ಶೀಲಾ ಡಿಸೋಜ, ಹೆಚ್.ವಿ. ಜಯಮ್ಮ, ವಿ.ಎ. ಲಾರೆನ್ಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.