ನವದೆಹಲಿ, ಜು. ೨೧: ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾರತದ ೧೫ನೇ ರಾಷ್ಟçಪತಿಯಾಗಿ ಆಯ್ಕೆಯಾಗಿದ್ದು ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಬುಡಕಟ್ಟು ಮಹಿಳೆಯೊಬ್ಬರು ಈ ಹುದ್ದೆಗೇರಿದ್ದಾರೆ.

ತೀವ್ರ ಕುತೂಹಲ ಕೆರಳಿಸಿದ್ದ ರಾಷ್ಟçಪತಿ ಚುನಾವಣೆಯ ಮತ ಎಣಿಕೆಯಲ್ಲಿ ದ್ರೌಪದಿ ಮುರ್ಮು ಅವರು ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ಹಾ ವಿರುದ್ಧ ಗೆಲುವು ಸಾಧಿಸಿದ್ದಾರೆ.

ದ್ರೌಪದಿ ಮುರ್ಮು ಅವರಿಗೆ ೫,೧೨೧ ಮತಗಳು ದೊರೆತ್ತಿದ್ದು, ಈ ಮತಗಳ ಒಟ್ಟು ಮೌಲ್ಯ ೫,೭೭,೭೭೭ ಆಗಿದೆ. ಇನ್ನು ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ಹಾ ಅವರಿಗೆ ೧,೦೫೮ ಮತಗಳು ಬಿದ್ದಿದ್ದು ಇದರ ಮೌಲ್ಯ ೨,೬೧,೦೬೨ ಆಗಿದೆ. ಹಾಲಿ ಚಲಾವಣೆಯಾಗಿರುವ ಮತಗಳ ಪೈಕಿ ೧೫ ಸಂಸದರ ಮತಗಳು ಅಸಿಂಧು ಆಗಿದೆ ಎಂದು ಅಧಿಕಾರಿ ಪಿ.ಸಿ. ಮೋದಿ ತಿಳಿಸಿದ್ದಾರೆ. ಈ ಅಧ್ಯಕ್ಷೀಯ ಚುನಾವಣೆಯಲ್ಲಿ ಪ್ರತಿ ಒಂದು ಸಂಸದರ ಮತ ೭೦೦ ಮತಗಳ ಮೌಲ್ಯವನ್ನು ಹೊಂದಿದೆ.