ಸೋಮವಾರಪೇಟೆ, ಜು. ೨೦: ಇಲ್ಲಿನ ಸೋಮವಾರಪೇಟೆ ರೋಟರಿ ಹಿಲ್ಸ್ನ ನೂತನ ಅಧ್ಯಕ್ಷರಾಗಿ ಹೆಚ್.ಸಿ. ಲೋಕೇಶ್ ಆಯ್ಕೆಯಾಗಿದ್ದು, ಸ್ಥಳೀಯ ಸಂಕಪ್ಪ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜವಾಬ್ದಾರಿ ವಹಿಸಿಕೊಂಡರು. ಪದಗ್ರಹಣ ಕಾರ್ಯಕ್ರಮವನ್ನು ಜಿಲ್ಲಾ ಗವರ್ನರ್ ಹೆಚ್.ಆರ್. ಕೇಶವ್ ಉದ್ಘಾಟಿಸಿ, ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ರೋಟರಿ ಸಂಸ್ಥೆ ಹಲವಾರು ಜನಪರ ಕೆಲಸಗಳನ್ನು ಮಾಡುತ್ತಾ ಬಂದಿದೆ. ಮುಂದಿನ ದಿನಗಳಲ್ಲೂ ಸಮಾಜ ಸೇವೆಗೆ ನೂತನ ಆಡಳಿತ ಮಂಡಳಿ ಶ್ರಮಿಸಬೇಕೆಂದರು.

ವೇದಿಕೆಯಲ್ಲಿ ಸಹಾಯಕ ಗವರ್ನರ್ ಎಸ್.ಕೆ. ಸತೀಶ್, ವಲಯ ಸೇನಾನಿ ಎಂ.ಡಿ. ಲಿಖಿತ್, ಹಿಂದಿನ ಸಾಲಿನ ಅಧ್ಯಕ್ಷ ಎಂ.ಎA. ಪ್ರಕಾಶ್‌ಕುಮಾರ್, ಕಾರ್ಯದರ್ಶಿ ಡಿ.ಪಿ. ಧರ್ಮಪ್ಪ ಉಪಸ್ಥಿತರಿದ್ದರು. ನೂತನ ಸಾಲಿನ ಅಧ್ಯಕ್ಷರಾದ ಹೆಚ್.ಸಿ. ಲೋಕೇಶ್, ಕಾರ್ಯದರ್ಶಿ ಆದರ್ಶ್ ತಮ್ಮಯ್ಯ ಮತ್ತು ತಂಡದವರು ಅಧಿಕಾರ ಸ್ವೀಕರಿಸಿದರು.