ಗೋಣಿಕೊಪ್ಪಲು, ಜು. ೨೧: ವಿದ್ಯಾರ್ಥಿಗಳಲ್ಲಿ ಅವರದೇ ಆದಂತಹ ಸಾಮರ್ಥ್ಯವಿರುತ್ತದೆ. ಇದನ್ನು ಪೋಷಕರು ಗುರುತಿಸಿ ಅವರನ್ನು ಪ್ರೋತ್ಸಾಹಿಸಬೇಕು. ಸಮಾಜದಲ್ಲಿ ತಂದೆ ತಾಯಿ ತಲೆ ಎತ್ತಿ ನಡೆಯ ಬೇಕಾದರೆ ವಿದ್ಯಾರ್ಥಿಗಳು ಸಾಧನೆ ಮಾಡಬೇಕೆಂದು ಮಹೇಶ್ ಫೌಂಡೇಷನ್‌ನ ಮುಖ್ಯಸ್ಥ ರಾಘವೇಂದ್ರ ಭಾರದ್ವಜ್ ಸಲಹೆಯಿತ್ತರು. ಗೋಣಿಕೊಪ್ಪಲುವಿನ ವಿದ್ಯಾನಿಕೇತನ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಯಿಂದ ಆಗುವ ಪ್ರಯೋಜನಗಳ ಬಗ್ಗೆ ಹಮ್ಮಿಕೊಂಡಿದ್ದ ಕಾರ್ಯಗಾರದಲ್ಲಿ ಪೋಷಕರನ್ನು ಹಾಗೂ ವಿದ್ಯಾರ್ಥಿ ಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ವಿಭಿನ್ನವಾಗಿ ಆಲೋಚನೆ ಮಾಡಬೇಕು. ಗೋಣಿಕೊಪ್ಪಲು, ಜು. ೨೧: ವಿದ್ಯಾರ್ಥಿಗಳಲ್ಲಿ ಅವರದೇ ಆದಂತಹ ಸಾಮರ್ಥ್ಯವಿರುತ್ತದೆ. ಇದನ್ನು ಪೋಷಕರು ಗುರುತಿಸಿ ಅವರನ್ನು ಪ್ರೋತ್ಸಾಹಿಸಬೇಕು. ಸಮಾಜದಲ್ಲಿ ತಂದೆ ತಾಯಿ ತಲೆ ಎತ್ತಿ ನಡೆಯ ಬೇಕಾದರೆ ವಿದ್ಯಾರ್ಥಿಗಳು ಸಾಧನೆ ಮಾಡಬೇಕೆಂದು ಮಹೇಶ್ ಫೌಂಡೇಷನ್‌ನ ಮುಖ್ಯಸ್ಥ ರಾಘವೇಂದ್ರ ಭಾರದ್ವಜ್ ಸಲಹೆಯಿತ್ತರು. ಗೋಣಿಕೊಪ್ಪಲುವಿನ ವಿದ್ಯಾನಿಕೇತನ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಯಿಂದ ಆಗುವ ಪ್ರಯೋಜನಗಳ ಬಗ್ಗೆ ಹಮ್ಮಿಕೊಂಡಿದ್ದ ಕಾರ್ಯಗಾರದಲ್ಲಿ ಪೋಷಕರನ್ನು ಹಾಗೂ ವಿದ್ಯಾರ್ಥಿ ಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ವಿಭಿನ್ನವಾಗಿ ಆಲೋಚನೆ ಮಾಡಬೇಕು. ಪೊಷಕರಿಗೆ ವಿದ್ಯಾರ್ಥಿಗಳು ಆತಂಕ ತರದೆ ಓದಿನಲ್ಲಿ ಹೆಚ್ಚಿನ ಸಮಯ ಕಳೆಯಬೇಕು ಎಂದರಲ್ಲದೆ, ಮಹೇಶ್ ಫೌಂಡೇಷನ್ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುವ ಮೂಲಕ ಭವಿಷ್ಯ ರೂಪಿಸಿದೆ ಎಂದರು. ಮತ್ತೋರ್ವ ಅತಿಥಿ ಆರ್. ಲೋಹಿತ್ ಮಾತನಾಡಿ, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆಯಲು ಉತ್ತಮ ಅವಕಾಶವಿದೆ. ಸಮಯವನ್ನು ವ್ಯಯ ಮಾಡದೆ, ಓದಿನಲ್ಲಿ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಪ್ರಾಂಶು ಪಾಲ ಹರೀಶ್ ತಮಾನ್‌ಕರ್ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮಹತ್ವವನ್ನು ತಿಳಿಸುವ ನಿಟ್ಟಿನಲ್ಲಿ ಕಾರ್ಯಾ ಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಮಂಗಳೂರು ಮಹೇಶ್ ಫೌಂಡೇಷನ್‌ನ ಸಂಪನ್ಮೂಲ ವ್ಯಕ್ತಿಗಳಾದ ಪ್ರದೀಪ್ ಆತ್ರೇಯಸ್, ಸಿ.ವಿ. ತ್ಯಾಗರಾಜ್ ಭಾಗವಹಿಸಿದ್ದರು. ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜಿನ ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಕನ್ನಡ ಪ್ರಾಧ್ಯಾಪಕ ಡಿ.ಎಸ್. ಸಂತೋಷ್ ಕುಮಾರ್ ಸ್ವಾಗತಿಸಿ, ವಂದಿಸಿದರು.