ಮಡಿಕೇರಿ, ಜು. ೨೨: ಯುವ ಸಬಲೀಕರಣ ಕ್ರೀಡಾ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಹಾಗೂ ಮೂರು ತಾಲೂಕು ಯುವ ಒಕ್ಕೂಟ, ಯೂತ್ ಹಾಸ್ಟೆಲ್ ಅಸೋಸಿಯೇಶನ್ ಆಫ್ ಇಂಡಿಯಾ ಹಾಗೂ ಕಾವೇರಿ ಯುವಕ ಸಂಘ, ಕಗ್ಗೋಡ್ಲು ಇವರ ಸಂಯುಕ್ತಾಶ್ರಯದಲ್ಲಿ ತಾ. ೨೩ ರಂದು (ಇಂದು) ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ.
ಕಗ್ಗೋಡ್ಲು ಪೊಡನೋಳಂಡ ಬೋಪಣ್ಣ ಕುಶಾಲಪ್ಪ ಅವರ ಗದ್ದೆಯಲ್ಲಿ ನಡೆಯುವ ಕ್ರೀಡಾಕೂಟದ ಉದ್ಘಾಟನೆಯ ನಂತರ, ಸಾರ್ವಜನಿಕ ವಿಭಾಗದ ವಾಲಿಬಾಲ್, ಥ್ರೋಬಾಲ್, ಹಗ್ಗ-ಜಗ್ಗಾಟ ನಡೆಯಲಿದೆ. ಅಪರಾಹ್ನ ೧ ಗಂಟೆಯ ನಂತರ ಪ್ರಾಥಮಿಕ ಶಾಲಾ ಮಕ್ಕಳಿಗೆ, ಪದವಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಓಟದ ಸ್ಪರ್ಧೆ ನಡೆಯಲಿದೆ. ಸಾರ್ವಜನಿಕ ಪುರುಷ - ಮಹಿಳಾ ವಿಭಾಗದ ಮುಕ್ತ ಓಟ; ೪೦ ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕ ಓಟದ ವ್ಯವಸ್ಥೆ ಏರ್ಪಡಿಸಲಾಗಿದ್ದು, ನಂತರ ಸಮಾರೋಪ ಸಮಾರಂಭ ನಡೆಯಲಿದೆ. ವಿಜೇತರಾದವರಿಗೆ ಆಕರ್ಷಕ ಟ್ರೋಫಿ, ದೃಢೀಕರಣ ಪತ್ರ ಹಾಗೂ ನಗದು ಬಹುಮಾನವನ್ನು ವಿತರಿಸಲಾಗುವುದು.