ಕಡಂಗ, ಜು. ೨೨: ವೀರಾಜಪೇಟೆಯಿಂದ ನಾಪೋಕ್ಲುವಿಗೆ ತೆರಳುವ ಮುಖ್ಯ ರಸ್ತೆಯಲ್ಲಿ ಕಳೆದ ೫ ದಿನಗಳ ಹಿಂದೆ ಭಾರೀ ಮಳೆಯಿಂದ ಕರಡ ಗ್ರಾಮದ ಸೇತುವೆ ಸಮೀಪದ ರಸ್ತೆಯಲ್ಲಿ ಬೃಹತ್ ಗಾತ್ರದ ಗುಂಡಿ ಸೃಷ್ಟಿಯಾಗಿದೆ. ವಾಹನ ಸಂಚರಿಸಲು ತುಂಬಾ ಕಷ್ಟಕರವಾಗಿದ್ದು, ಈ ಬಗ್ಗೆ ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದರೂ ರಸ್ತೆ ಗುಂಡಿಯನ್ನು ಮುಚ್ಚುವ ಪ್ರಯತ್ನ ಮಾಡದೇ, ಕಾಟಾಚಾರಕ್ಕೆ ಸ್ವಲ್ಪ ಕಲ್ಲನ್ನು ಹಾಕಲಾಗಿದೆ.