ಸೋಮವಾರಪೇಟೆ, ಜು. ೨೨: ಭಾರತೀಯ ಜನತಾ ಪಾರ್ಟಿ ಎಸ್.ಸಿ. ಮೋರ್ಚಾದ ಪದಾಧಿಕಾರಿ ಗಳು ಸಮುದಾಯದಲ್ಲಿ ಇಂದಿಗೂ ಹಿಂದುಳಿದಿರುವ ಮಂದಿಯ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು. ಈ ಕಾರ್ಯಕ್ಕೆ ಪಕ್ಷ ಹಾಗೂ ಜನಪ್ರತಿನಿಧಿಗಳ ಸಹಕಾರ ಪಡೆಯಬೇಕು ಎಂದು ಬಿ.ಜೆ.ಪಿ. ಮಂಡಲ ಅಧ್ಯಕ್ಷ ಮನುಕುಮಾರ್ ರೈ ಹೇಳಿದರು.

ಇಲ್ಲಿನ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ಮಂಡಲ ಎಸ್.ಸಿ. ಮೋರ್ಚಾದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಶ್ರೇಯೋಭಿವೃದ್ಧಿಗೆ ಬಿಜೆಪಿ ನೇತೃತ್ವದ ಸರ್ಕಾರಗಳು ಹಲವಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳ ಬಗ್ಗೆ ಎಲ್ಲರಿಗೂ ಮಾಹಿತಿ ನೀಡುವ ಕೆಲಸವನ್ನು ಪದಾಧಿಕಾರಿಗಳು ಮಾಡಬೇಕು. ಸರ್ಕಾರದ ಯೋಜನೆಗಳ ಬಗ್ಗೆ ಪ್ರತಿಯೋರ್ವರಲ್ಲೂ ಜಾಗೃತಿ ಮೂಡಿಸಬೇಕು. ಹಿಂದುಳಿದಿರುವ ಮಂದಿಯನ್ನು ಸಮಾಜದ ಮಖ್ಯ ವಾಹಿನಿಗೆ ತರಲು ಶ್ರಮಿಸಬೇಕು ಎಂದು ಕರೆ ನೀಡಿದರು.

ಭಾರತಿಯ ಜನತಾ ಪಾರ್ಟಿಯು ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಪಕ್ಷದಲ್ಲಿ ಹೆಚ್ಚಿನ ಸ್ಥಾನಮಾನವನ್ನು ನೀಡುತ್ತಿದೆ ಎಂದ ಅವರು, ಮಳೆ ಹಾನಿಯಿಂದ ಸಂತ್ರಸ್ತರಾದ ಮಂದಿಗೆ ತಕ್ಷಣ ಪರಿಹಾರ ಲಭಿಸುವಂತೆ ನೊಡಿಕೊಳ್ಳಬೇಕು. ಹಕ್ಕುಪತ್ರಗಳಿಂದ ವಂಚಿತರಾಗದAತೆ ಗಮನ ಹರಿಸಬೇಕು ಎಂದರು.

ಎಸ್.ಸಿ. ಮೋರ್ಚಾದ ಜಿಲ್ಲಾಧ್ಯಕ್ಷ ಎಸ್.ಎ. ಪ್ರತಾಪ್ ಮಾತನಾಡಿ, ಪ್ರತಿ ತಿಂಗಳು ಮೋರ್ಚಾದ ಸಭೆಗಳು ಆಗಬೇಕು. ಸಭೆಗಳಲ್ಲಿ ದಲಿತ ಕಾಲೋನಿಗಳ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಸಂಬAಧಪಟ್ಟ ಅಧಿಕಾರಿಗಳು ಹಾಗೂ ಶಾಸಕರಿಂದ ಪರಿಹಾರ ಒದಗಿಸಿ ಕೊಡಲು ಪ್ರಯತ್ನಿಸಬೇಕೆಂದು ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ಎಸ್.ಸಿ. ಮೋರ್ಚಾ ಅಧ್ಯಕ್ಷ ಹೆಚ್.ಸಿ. ರಾಮಕೃಷ್ಣ ವಹಿಸಿದ್ದರು. ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ ಚಂದ್ರು, ಓ.ಬಿ.ಸಿ. ಮೋರ್ಚಾದ ವಿಜಯ್, ಪ.ಪಂ. ಸದಸ್ಯೆ ಮೋಹಿನಿ, ಮೋರ್ಚಾದ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್, ಪ್ರವೀಣ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಮೋಕ್ಷಿತ್, ಕೃಷ್ಣಪ್ಪ, ಯುವ ಮೋರ್ಚಾ ಅಧ್ಯಕ್ಷ ಚಂದ್ರಶೇಖರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.