ಕೂಡಿಗೆ, ಜು. ೨೨: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಬ್ಬಿನಗದ್ದೆ ಯಿಂದ ಹೊಸಪಟ್ಟಣದವರೆಗೆ ಲೋಕೋಪಯೋಗಿ ಇಲಾಖೆಯ ವತಿಯಿಂದ ನಾಲ್ಕು ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಲೋಕೋಪಯೋಗಿ ಮತ್ತು ಜಿಲ್ಲಾ ಮಟ್ಟದ ವಿವಿಧ ಅನುದಾನವನ್ನು ಬಳಕೆ ಮಾಡಿಕೊಂಡು ಕ್ಷೇತ್ರ ವ್ಯಾಪ್ತಿಯ ವಿವಿಧ ರಸ್ತೆಯ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ ಗ್ರಾಮಗಳ ಪ್ರಗತಿಗೆ ರಸ್ತೆಗಳ ಅಭಿವೃದ್ಧಿ ಮುಖ್ಯವಾಗಿದೆ ಎಂದರು.
ಈ ಸಂದರ್ಭ ನಂಜರಾಯ ಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್. ವಿಶ್ವ, ಉಪಾಧ್ಯಕ್ಷ ಸುಮಿರ್, ಸದಸ್ಯರಾದ ರಕ್ಷಿತ್, ಕುಸುಮ, ಗಿರಿಜಾ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಸವನಹಳ್ಳಿ ಸಹಕಾರ ಸಂಘದ ಅಧ್ಯಕ್ಷ ಆರ್.ಕೆ. ಚಂದ್ರು ಹಾಗೂ ಅಭಿವೃದ್ಧಿ ಅಧಿಕಾರಿ ಕಲ್ಪಾ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.