ಕುಶಾಲನಗರ, ಜು. ೨೨: ಗಿಡ ಮರಗಳ ಸಂರಕ್ಷಣೆಯೊAದಿಗೆ ಪ್ರತಿಯೊಬ್ಬರು ಗಿಡ ನೆಟ್ಟು ಬೆಳೆಸುವ ಕೆಲಸ ನಿರಂತರವಾಗಿ ನಡೆಯಬೇಕು ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕರೆ ನೀಡಿದ್ದಾರೆ.

ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದೊಂದಿಗೆ ವಾಸವಿ ಯುವಜನ ಸಂಘ ಮತ್ತು ವಾಸವಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಜಾದಿ ಕಾ ಅಮೃತ ಮಹೋತ್ಸವ ಮತ್ತು ಸಂಘದ ೫೦ನೇ ವರ್ಷದ ವಾರ್ಷಿಕೋತ್ಸವದ ನೆನಪಿಗಾಗಿ ನಡೆದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಉತ್ತಮ ಪರಿಸರ ನಿರ್ಮಾಣ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು. ಕಾಲೇಜು ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು. ಈ ಸಂದರ್ಭ ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್, ಕುಡ ಅಧ್ಯಕ್ಷ ಎಂ.ಎA. ಚರಣ್, ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಚೆಲುವರಾಜ್, ಎಂ.ವಿ. ನಾರಾಯಣ್, ಡಾ. ಶಾಂತಲಕ್ಷಿö್ಮ, ಬಿಜೆಪಿ ನಗರಾಧ್ಯಕ್ಷ ಉಮಶಂಕರ್, ವಾಸವಿ ಯುವಜನ ಸಂಘದ ಅಧ್ಯಕ್ಷ ಕೆ. ಪ್ರವೀಣ್, ಉಪಾಧ್ಯಕ್ಷ ವೈಶಾಕ್, ಬಾಲಾಜಿ, ಕಾರ್ಯದರ್ಶಿ ಅಂಜನ್, ಶ್ರೇಯಸ್, ಶೋಭಸತ್ಯ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಹೆಚ್.ವಿ. ಶಿವಪ್ಪ, ಪ್ರಾಂಶುಪಾಲ ಪ್ರವೀಣ್, ಎನ್‌ಎಸ್‌ಎಸ್ ಘಟಕದ ರಮೇಶ್ ಮತ್ತಿತ್ತರರು ಇದ್ದರು.