ಮಡಿಕೇರಿ, ಜು. ೨೨: ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕುಪ್ಪಳ್ಳಿಯ ಕವಿಶೈಲದಲ್ಲಿ ತಾ. ೨೩, ೨೪ ರಂದು ‘ಮುಂಗಾರು ಸಂಸ್ಕೃತಿ ಚಿಂತನಾ ಶಿಬಿರ’ ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಯ ಆಯ್ದ ಆಸಕ್ತರನ್ನು ಒಳಗೊಂಡ ಶಿಬಿರ ಕುಪ್ಪಳಿಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು, ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್ ಮತ್ತು ಜಿಲ್ಲಾ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ನೇತೃತ್ವದಲ್ಲಿ ಭಾಗವಹಿಸಲಿದ್ದಾರೆ ಎಂದು ಸೋಮವಾರಪೇಟೆ ತಾಲೂಕು ಗೌರವ ಕಾರ್ಯದರ್ಶಿ ಜ್ಯೋತಿ ಅರುಣ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.