ಕೂಡಿಗೆ, ಜು. ೨೨: ಇಲ್ಲಿಗೆ ಸಮೀಪದ ಮುಳ್ಳಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ಗ್ರಾಮ ಪಂಚಾಯಿತಿ ವತಿಯಿಂದ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಕ್ಷ ಚೆಲುವರಾಜ್ ವಹಿಸಿದ್ದರು. ನಂತರ ಮಾತನಾಡಿದ ಅವರು, ಶಿಕ್ಷಣ ವ್ಯವಸ್ಥೆಗೆ ಸಹಕಾರ ನೀಡುವುದು ಗ್ರಾ.ಪಂ. ಆದ್ಯ ಕರ್ತವ್ಯವಾಗಿದೆ ಎಂದರು.

ಈ ಸಂದರ್ಭ ಉಪಾಧ್ಯಕ್ಷೆ ಜಯಮ್ಮ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮೇಶ್, ಸದಸ್ಯರುಗಳಾದ ಶಿವಾನಂದ, ಮುರುಳಿ, ರಮೇಶ್, ಪಾರ್ವತಿ, ಚಿತ್ರಕಲಾ, ಪದ್ಮಾವತಿ, ಶಾಲಾ ಮುಖ್ಯೋಪಾಧ್ಯಾಯಿನಿ ಭಾಗ್ಯ ಹಾಗೂ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಉಪಸ್ಥಿತರಿದ್ದರು. ಶಿಕ್ಷಕ ಶಿವಲಿಂಗು ಸ್ವಾಗತಿಸಿ, ವಂದಿಸಿದರು.