ಮಡಿಕೇರಿ, ಜು. ೨೨: ಕೇಂದ್ರ ಸರಕಾರ ರಾಜಕೀಯವಾಗಿ ಪ್ರವರ್ಧಮಾನಕ್ಕೆ ಬರುವ ನಿಟ್ಟಿನಲ್ಲಿ ಜಾರಿ ನಿರ್ದೇಶನಾಲಯವನ್ನು (ಇ.ಡಿ.) ದುರಪಯೋಗಪಡಿಸಿ ಕೊಳ್ಳುತ್ತಿದ್ದು, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ವಿಚಾರಣೆ ನಡೆಸುವ ನೆಪದಲ್ಲಿ ಅವರ ಮಾನಸಿಕ ಸ್ಥೆöÊರ್ಯ ಕುಗ್ಗಿಸುವ ಯತ್ನವಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ನಗರದಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ, ಜನರಲ್ ತಿಮ್ಮಯ್ಯ ವೃತ್ತದ ಮೂಲಕ ಗಾಂಧಿ ಮೈದಾನದ ತನಕ ಮೆರವಣಿಗೆ ಸಾಗಿದ ಪ್ರತಿಭಟನಾಕಾರರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೆ.ಪಿ.ಸಿ.ಸಿ. ವಕ್ತಾರ ಲಕ್ಷö್ಮಣ್ ಮಾತನಾಡಿ, ದೇಶದಲ್ಲಿ ಜನರು ಬದುಕಲಾಗದ ಸ್ಥಿತಿಯನ್ನು ಬಿಜೆಪಿ ಸೃಷ್ಟಿ ಮಾಡಿದೆ. ಹಿಟ್ಲರ್ ರೀತಿ ಮೋದಿ ನಡೆದುಕೊಳ್ಳುತ್ತಿದ್ದಾರೆ. ನೈತಿಕತೆ ಇದ್ದರೆ ನೇರವಾಗಿ ಚುನಾವಣೆ ಎದುರಿಸಬೇಕು. ಆದರೆ, ಬಿಜೆಪಿ ಇ.ಡಿ., ಐ.ಟಿ.ಯಂತಹ ಸಂಸ್ಥೆಗಳನ್ನು ಬಳಸಿಕೊಂಡು ಕಾಂಗ್ರೆಸ್ ನಾಯಕರ ಮೇಲೆ ದಾಳಿ ನಡೆಸಿ ಪಕ್ಷಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ಯಾವುದೇ ಜನಪರ ಯೋಜನೆಗಳನ್ನು ಕೇಂದ್ರ ಹಾಗೂ ರಾಜ್ಯ ಸರಕಾರ ನೀಡಿಲ್ಲ. ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ನಾಯಕರನ್ನು ಗುರಿ ಇರಿಸಿಕೊಂಡು ಆದಾಯ ತೆರಿಗೆ ದಾಳಿ ಮಾಡಿಸುವುದು ಮಾತ್ರ ಬಿಜೆಪಿ ಕೆಲಸ ಎಂದು ವ್ಯಂಗ್ಯವಾಡಿದರು.
ದೇಶದಲ್ಲಿ ಬಡವರು ಹಾಗೂ ಶ್ರೀಮಂತ ಎಂದು ವಿಂಗಡಿಸುವ ಕೆಲಸವಾಗುತ್ತಿದೆ. ಮುಂದಿನ ದಿನಗಳಲ್ಲಿ ಬಡವರ ಮತದಾನದ ಹಕ್ಕನ್ನು ಕಸಿಯುವ ಸಂಚು ಬಿಜೆಪಿ ಸರಕಾರ ರೂಪಿಸಿದೆ ಎಂದ ಅವರು, ಯಾವುದೇ ರೀತಿಯ ಎಫ್.ಐ.ಆರ್. ಇಲ್ಲದೆ ವಿಚಾರಣೆ ನಡೆಸುತ್ತಿರುವುದು ಹಾಸ್ಯಸ್ಪದ. ನ್ಯಾಷನಲ್ ಹೆರಾಲ್ಡ್ ಸಂಸ್ಥೆ ಇದ್ದ ಸಂದರ್ಭದಲ್ಲಿ ರಾಹುಲ್ ಗಾಂಧಿ ರಾಜಕಾರಣದಲ್ಲಿ ಇರಲಿಲ್ಲ. ಅವರನ್ನು ಯಾಕಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪ್ರಶ್ನಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತೀರ ಧರ್ಮಜ ಉತ್ತಪ್ಪ ಮಾತನಾಡಿ, ನ್ಯಾಷನಲ್ ಹೆರಾಲ್ಡ್ ದೇಶದ ಸ್ವಾತಂತ್ರö್ಯಕ್ಕಾಗಿ
(ಮೊದಲ ಪುಟದಿಂದ) ರೂಪುಗೊಂಡ ಪತ್ರಿಕೆಯಾಗಿದೆ. ನಷ್ಟದ ಹಿನ್ನೆಲೆ ಸಂಸ್ಥೆ ಮುಚ್ಚಲ್ಪಟ್ಟಿತ್ತು. ಇದೀಗ ವಿನಾಕಾರಣ ಕಾಂಗ್ರೆಸ್ ನಾಯಕರಿಗೆ ಕಳಂಕ ತರುವ ಉದ್ದೇಶದಿಂದ ಈ ರೀತಿಯ ಸಂಚನ್ನು ಕೇಂದ್ರ ಮಾಡಿದೆ. ಭ್ರಷ್ಟಾಚಾರ ಆರೋಪ ಹೊತ್ತ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕೆಲ ಸಮಯದಲ್ಲಿ ಕ್ಲೀನ್ ಚೀಟ್ ಪಡೆದಿದ್ದಾರೆ. ಆದರೆ, ಯಾವುದೇ ತಪ್ಪು ಮಾಡದೆ ಕಾನೂನು ಬಾಹಿರವಾಗಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಕರೆಸಿ ವಿಚಾರಣೆ ಮಾಡುತ್ತಿರುವುದು ಸರಿಯಲ್ಲ ಎಂದು ಖಂಡಿಸಿದರು.
ಕಾವೇರಿ ಹಾಗೂ ಕೊಡವರ ಅವಹೇಳನ ಮಾಡಿದ ಪ್ರಕರಣದ ಹಿಂದೆ ಕಾಣದ ಕೈಗಳು ಅಡಗಿವೆ. ಚುನಾವಣೆ ಸಮಯದಲ್ಲಿ ಜನರನ್ನು ಭಾವನಾತ್ಮಕವಾಗಿ ಸೆಳೆಯುವ ನಿಟ್ಟಿನಲ್ಲಿ ಈ ರೀತಿ ಮಾಡಲಾಗಿದೆ ಎಂದು ಆರೋಪಿಸಿದ ಅವರು, ಸೂಕ್ತ ಕ್ರಮಕ್ಕೆ ಆಗ್ರಹಿಸಿದರು.
ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಮಾತನಾಡಿ, ಕಾನೂನು ಬಾಹಿರವಾಗಿ ವಿಚಾರಣೆ ನಡೆಯುತ್ತಿದೆ. ರಾಹುಲ್ ಈ ಪ್ರಕರಣದ ಭಾಗವಾಗಿಲ್ಲ. ಆದರೆ, ಅವರನ್ನು ವಿಚಾರಣೆ ನಡೆಸುತ್ತಿರುವುದರಿಂದ ಇದೊಂದು ರಾಜಕೀಯ ಪ್ರೇರಿತ ದಾಳಿ ಎಂದು ಸ್ಪಷ್ಟವಾಗುತ್ತದೆ. ಕಾಂಗ್ರೆಸ್ ಮುಕ್ತ ಭಾರತ ಮಾಡಬೇಕೆಂಬ ಬಿಜೆಪಿ ಗುರಿಯನ್ನು ಸಾಧಿಸಲು ಈ ರೀತಿಯ ಹುನ್ನಾರಗಳು ನಡೆಯುತ್ತಿರುವುದು ವಿಷಾಧನೀಯ ಎಂದರು.
ಈ ಸಂದರ್ಭ ವಿಧಾನ ಪರಿಷತ್ತು ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ, ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷರುಗಳಾದ ಟಿ.ಪಿ. ರಮೇಶ್, ಕೆ.ಕೆ. ಮಂಜುನಾಥ್ ಕುಮಾರ್, ಪ್ರಮುಖರಾದ ಡಾ. ಮಂಥರ್ ಗೌಡ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರಯ್ಯಾ ಅಬ್ರಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.