ಮಡಿಕೇರಿ, ಜು. ೨೨: ಸ್ವಾತಂತ್ರö್ಯ ಅಮೃತ ಮಹೋತ್ಸವದ ಅಂಗವಾಗಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಚರ್ಚಿಸಲಾಯಿತು. ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ವಿನಯ್ ಕುಮಾರ್ ಸೋರಕೆ ಮಾತನಾಡಿ, ಮುಂದಿನ ದಿನಗಳಲ್ಲಿ ಜಿಲ್ಲಾ ಮುಖಂಡರೊAದಿಗೆ ತೆರಳಿ ಪ್ರತಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂದಾಗಬೇಕೆAದು ಕರೆ ನೀಡಿದರು.

ಕೆಪಿಸಿಸಿ ವಕ್ತಾರ ಹಾಗೂ ಜಿಲ್ಲಾ ಉಸ್ತುವಾರಿ ಎಂ. ಲಕ್ಷö್ಮಣ್ ಮಾತನಾಡಿ, ಜಿಲ್ಲೆಯಲ್ಲಿ ಸಂಸದರು, ಶಾಸಕರು ಬಿಜೆಪಿಯವರೇ ಇದ್ದು, ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಆಡಳಿತವಿದೆ. ಜಿಲ್ಲೆಗೆ ಇವರು ನೀಡಿರುವ ಕೊಡುಗೆಗಳ ಬಗ್ಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಚರ್ಚೆ ಮಾಡುವ ಪರಿಸ್ಥಿತಿ ಬಂದಿದೆ ಎಂದರು.

ಕೆಪಿಸಿಸಿ ಸಂಯೋಜಕ ಟಿ.ಪಿ. ರಮೇಶ್ ಪ್ರಾಸ್ತಾವಿಕವಾಗಿ ಮಾತ ನಾಡಿ, ಸ್ವಾತಂತ್ರö್ಯ ದಿನಾಚರಣೆಯ ಅಮೃತ ಮಹೋತ್ಸವವನ್ನು ಅತ್ಯಂತ ಯಶಸ್ವಿಯಾಗಿ ಶಿಸ್ತುಬದ್ಧವಾಗಿ ಆಚರಿಸಲು ಮನವಿ ಮಾಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಹಂಸ, ಸ್ವಾತಂತ್ರೊö್ಯÃತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಬ್ಲಾಕ್ ಕಾಂಗ್ರೆಸ್ ಈಗಾಗಲೇ ಸಿದ್ಧತೆ ಮಾಡಿಕೊಂಡಿದೆ ಎಂದರು. ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್. ಚಂದ್ರಮೌಳಿ ಕಾರ್ಯಕ್ರಮದ ಕುರಿತು ಮಾತನಾಡಿದರು.

ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ, ಯುವ ಮುಖಂಡ ಡಾ. ಮಂಥರ್ ಗೌಡ, ನಿಕಟಪೂರ್ವ ಅಧ್ಯಕ್ಷ ಕೆ.ಕೆ. ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುಜು ತಿಮ್ಮಯ್ಯ, ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ಗೌರವ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್‌ಗೌಡ, ಸೇವಾದಳದ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರ ಮೈನಾ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ. ಉಸ್ಮಾನ್, ನಗರಾಧ್ಯಕ್ಷ ಕೆ.ಜಿ. ಪೀಟರ್, ಸೈನಿಕ ಘಟಕದ ಅಧ್ಯಕ್ಷ ಬೊಳ್ಳಿಯಂಡ ಗಣೇಶ್, ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್ ಹೊಸೂರು, ಕೊಡಗು ಯುವ ಕಾಂಗ್ರೆಸ್, ಎನ್‌ಎಸ್‌ಯುಐ ಪದಾಧಿಕಾರಿಗಳು ಮಹಿಳಾ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಮಡಿಕೇರಿ ಬ್ಲಾಕ್ ಉಪಾಧ್ಯಕ್ಷ ಪ್ರಭು ರೈ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್ ನಿರೂಪಿಸಿ, ಖಜಾಂಚಿ ಬಲ್ಲಚಂಡ ಚಂದನ್ ವಂದಿಸಿದರು.