ಮಡಿಕೇರಿ, ಜು. ೨೨: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿAದ ಕಳುಹಿಸಿ ಕೊಟ್ಟಂತಹ ವಾರ್ಷಿಕ ಯೋಜನಾ ಪುಸ್ತಕವನ್ನು ಬಿಡುಗಡೆ ಮಾಡಿದರು.

ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ, ಮಡಿಕೇರಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಬಿ.ಎಂ. ರಮೇಶ್, ಜಿಲ್ಲಾ ಕಾರ್ಯದರ್ಶಿ ಎಂ.ಎA. ವಸಂತಿ, ಜಿಲ್ಲಾ ಸಹ ಕಾರ್ಯದರ್ಶಿ ಸರೋಜಾ, ಜಿಲ್ಲಾ ಖಜಾಂಚಿ ಪುಷ್ಪವೇಣಿ, ಮಡಿಕೇರಿ ಸ್ಥಳೀಯ ಸಂಸ್ಥೆಯ ಖಜಾಂಚಿ ರತೀಸ್, ಸ್ಕೌಟ್ ಮಾಸ್ಟರ್ ಪ್ರಸನ್ನ, ಕುಮಾರಸ್ವಾಮಿ, ಜಿಲ್ಲಾ ಸಂಘಟಕಿ ಯು.ಸಿ. ದಮಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನಗರದ ಜಿ.ಪಂ. ಕಚೇರಿ ಸಭಾಂಗಣದಲ್ಲಿ ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿAದ ಕಳುಹಿಸಿಕೊಟ್ಟಂತಹ ವಾರ್ಷಿಕ ಯೋಜನಾ ಪುಸ್ತಕವನ್ನು ಜಿ.ಪಂ. ಸಿಇಓ ಭಂವರ್ ಸಿಂಗ್ ಮೀನಾ ಬಿಡುಗಡೆಗೊಳಿಸಿದರು.