ಮಡಿಕೇರಿ,ಜು. ೨೩: ಸ್ವಾತಂತ್ರö್ಯದ ವಜ್ರ ಮಹೋತ್ಸವದ ಅಂಗವಾಗಿ ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ತಾ.೨೬ರಂದು ಆಯೋಜಿಸಲಾಗಿದೆ.

‘ನನ್ನ ಕನಸಿನ ಭಾರತ’ ಎಂಬ ವಿಷಯದ ಕುರಿತು ಚಿತ್ರಕಲಾ ಸ್ಪರ್ಧೆ, ‘ಸ್ವಚ್ಛ ಭಾರತ’ ಕುರಿತು ಪೋಸ್ಟರ್ ತಯಾರಿಕೆ ಸ್ಪರ್ಧೆ ಹಾಗೂ ‘ಕರ್ನಾಟಕದಲ್ಲಿ ಸ್ವಾತಂತ್ರö್ಯ ಹೋರಾಟ’ ಎಂಬ ವಿಷಯದ ಕುರಿತು ಕಿರುನಾಟಕ ಸ್ಪರ್ಧೆ ನಡೆಯಲಿದೆ.

ಚಿತ್ರಕಲೆ ಮತ್ತು ಪೋಸ್ಟರ್ ತಯಾರಿಕೆಗೆ ಜಿಲ್ಲೆಯ ಪ್ರತೀ ಕಾಲೇಜಿನಿಂದ ಒಬ್ಬ ಸ್ಪರ್ಧಾರ್ಥಿಗೆ, ಕಿರು ನಾಟಕ ಸ್ಪರ್ಧೆಗೆ ಒಂದು ತಂಡದಲ್ಲಿ ಹತ್ತು ಜನ ಕಲಾವಿದರು ಮತ್ತು ಐದು ಜನ ರಂಗ ತಾಂತ್ರಿಕರಿಗೆ ಅವಕಾಶವಿರುತ್ತದೆ.

ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಮೊದಲ ಐದು ಸ್ಥಾನಗಳನ್ನು ಪಡೆದ ವಿದ್ಯಾರ್ಥಿಗಳು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಭಾಗವಹಿಸಲು ಮತ್ತು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಮೊದಲ ಮೂರು ಸ್ಥಾನ ಪಡೆದ ವಿದ್ಯಾರ್ಥಿಗಳು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆಯನ್ನು ಪಡೆಯುತ್ತಾರೆ.

ಅಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ಆದೇಶದನ್ವಯ ಮಂಗಳೂರು ವಿಶ್ವವಿದ್ಯಾನಿಲಯದ ಮಾರ್ಗಸೂಚಿ ಯಂತೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕೊಡಗು ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಯಾದ ಮೇಜರ್ ಡಾ. ರಾಘವ. ಬಿ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಇವರನ್ನು ಮೊ.ಸಂಖ್ಯೆ ೭೦೧೯೨೫೨೦೮೭/ ೯೪೪೮೭೨೧೨೦೫ ನ್ನು ಸಂಪರ್ಕಿಸ ಬಹುದಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಸಿ.ಜಗತ್ ತಿಮ್ಮಯ್ಯ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.