ಕಣಿವೆ, ಜು. ೨೩: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹೆಬ್ಬಾಲೆ ಹೋಬಳಿ ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ತಾ. ೨೫ ರಂದು ಮಧ್ಯಾಹ್ನ ೨.೩೦ ಗಂಟೆಗೆ ಹೆಬ್ಬಾಲೆ ಪ್ರೌಢಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್, ಕಸಾಪ ಹಿರಿಯ ಸದಸ್ಯ ಹೆಬ್ಬಾಲೆಯ ಜಿ.ಎಲ್. ರಾಮಪ್ಪ, ಮುಖ್ಯ ಅತಿಥಿಗಳಾಗಿ ಜಿ.ಪಂ. ಮಾಜಿ ಸದಸ್ಯ ಹೆಚ್.ಆರ್. ಶ್ರೀನಿವಾಸ್, ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎಸ್. ಮಧುಸೂದನ್, ಉಪಾಧ್ಯಕ್ಷೆ ಅರುಣಕುಮಾರಿ, ಹೆಬ್ಬಾಲೆ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಹೆಚ್.ವಿ. ಶಿವಪ್ಪ, ಮತ್ತಿತರರು ಭಾಗವಹಿಸಲಿದ್ದಾರೆ.

ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ನೂತನ ಸಾಲಿನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಮಣಜೂರು ಗ್ರಾಮದ ಎಂ.ಎನ್. ಮೂರ್ತಿ ಹೆಬ್ಬಾಲೆ ಹೋಬಳಿಯ ಕಸಾಪ ಅಧ್ಯಕ್ಷರಾಗಿ ನಿಯೋಜನೆ ಗೊಂಡಿದ್ದಾರೆ ಎಂದು ಕುಶಾಲನಗರ ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಎಸ್. ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.