ಸೋಮವಾರಪೇಟೆ, ಜು. ೨೩: ಅತಿಥಿ ಉಪನ್ಯಾಸಕರಿಗೆ ಪ್ರತಿ ತಿಂಗಳಿಗೆ ೨ ದಿನದ ಸಾಂಧರ್ಬಿಕ ರಜೆ, ಅನಾರೋಗ್ಯದ ನಿಮಿತ್ತ ರಜೆ ಹಾಗೂ ವಾರದಲ್ಲಿ ೫ ದಿನಗಳು ಕೆಲಸ ನಿರ್ವಹಿಸಲು ಸರ್ಕಾರ ಕೂಡಲೇ ಆದೇಶ ಹೊರಡಿಸಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಎಂ.ಎ. ಶ್ಯಾಮ್ ಪ್ರಸಾದ್ ಆಗ್ರಹಿಸಿದ್ದಾರೆ.
ಅತಿಥಿ ಉಪನ್ಯಾಸಕರಿಗೆ ವರ್ಷದ ೧೨ ತಿಂಗಳು ಸಂಬಳದೊAದಿಗೆ ಪ್ರತಿ ವರ್ಷ ಬಡ್ಡಿ ಮತ್ತು ವೇತನವನ್ನು ಹೆಚ್ಚಿಸಿ, ಉದ್ಯೋಗ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ಉನ್ನತ ಕಾಲೇಜು ಶಿಕ್ಷಣ ಇಲಾಖೆಯಿಂದ ಯಾವುದೇ ಅಧಿಕೃತ ಸುತ್ತೋಲೆ ಇಲ್ಲದಿದ್ದರೂ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರಿಂದ ಬೆಳಿಗ್ಗೆ ೯.೩೦ ರಿಂದ ಸಾಯಂಕಾಲ ೪ ಗಂಟೆಯವರೆಗೆ ಕೆಲಸ ಮಾಡಿಸುತ್ತಿದ್ದಾರೆ. ಪ್ರಾಂಶುಪಾಲರು ಮನಬಂದAತೆ ಅದೇಶ ಹೊರಡಿಸುತ್ತಿದ್ದಾರೆ. ಅತಿಥಿ ಉಪನ್ಯಾಸಕರ ಪಾಠ ಪ್ರವಚನ ಮುಗಿದ ನಂತರ ಕಾಲೇಜಿನಿಂದ ತೆರಳಲು ಅನುವು ಮಾಡಿಕೊಡಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯನ್ನು ಆಗ್ರಹಿಸಿದ್ದಾರೆ.