ಪಾಲಿಬೆಟ್ಟ, ಜು. ೨೩: ಕಾರ್ಗಿಲ್ ಹುತಾತ್ಮ ಯೋಧರ ಸ್ಮರಣೆ ಹಾಗೂ ಎಪಿಜೆ ಅಬ್ದುಲ್ ಕಲಾಂ ಸ್ಮರಣೆ ಕಾರ್ಯಕ್ರಮದ ಪ್ರಯುಕ್ತ ಸರ್ವ ಸಹಾಯಿ ಮಿತ್ರ ಮಂಡಳಿ ವತಿಯಿಂದ ರಕ್ತದಾನ ಶಿಬಿರ ಹಮ್ಮಿಕೊಂಡಿರು ವುದಾಗಿ ಮಂಡಳಿಯ ಅಧ್ಯಕ್ಷ ಅಬ್ದುಲ್ಲಾ ತಿಳಿಸಿದ್ದಾರೆ. ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ತಾ.೨೬ ರಂದು ಚೆನ್ನಯ್ಯಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೇರಳದ ಖ್ಯಾತ ಉರಗ ತಜ್ಞ ಸುರೇಶ್ ಅವರನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್, ತಾಲೂಕು ವೈದ್ಯಾಧಿಕಾರಿ ಡಾ. ಯತಿರಾಜ್, ಸಿದ್ದಾಪುರ ಠಾಣಾಧಿಕಾರಿ ಮೋಹನ್ ರಾಜ್, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಪಪ್ಪ ಆಗಮಿಸಲಿದ್ದಾರೆ.