ನಾಪೋಕ್ಲು, ಜು. ೨೩: ಸ್ಥಳಿಯ ಗ್ರಾಮ ಪಂಚಾಯಿತಿಗೆ ಒಳಪಟ್ಟ ಹೊಟೇಲ್, ಬೇಕರಿ, ಇನ್ನಿತರ ಅಂಗಡಿಗಳಲ್ಲಿ ಘನ ಮತ್ತು ದ್ರವ ತ್ಯಾಜ್ಯವನ್ನು ಪ್ರತ್ಯೇಕವಾಗಿ ವಿಂಗಡಿಸಿ ಕೊಡುವಂತೆ ಮನೆ, ಅಂಗಡಿಗಳಿಗೆ, ಮಾಲೀಕರಿಗೆ ನೋಟೀಸ್ ನೀಡಿದ್ದರೂ ನಾಪೋಕ್ಲು, ಜು. ೨೩: ಸ್ಥಳಿಯ ಗ್ರಾಮ ಪಂಚಾಯಿತಿಗೆ ಒಳಪಟ್ಟ ಹೊಟೇಲ್, ಬೇಕರಿ, ಇನ್ನಿತರ ಅಂಗಡಿಗಳಲ್ಲಿ ಘನ ಮತ್ತು ದ್ರವ ತ್ಯಾಜ್ಯವನ್ನು ಪ್ರತ್ಯೇಕವಾಗಿ ವಿಂಗಡಿಸಿ ಕೊಡುವಂತೆ ಮನೆ, ಅಂಗಡಿಗಳಿಗೆ, ಮಾಲೀಕರಿಗೆ ನೋಟೀಸ್ ನೀಡಿದ್ದರೂ ಪ್ಲಾಸ್ಟಿಕ್, ಘನ ಮತ್ತು ದ್ರವ ತ್ಯಾಜ್ಯಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ ಪ್ರತಿದಿನ ಕಸ ವಿಲೇವಾರಿ ವಾಹನಕ್ಕೆ ನೀಡಬೇಕು. ಇತರ ಕಡೆ ಎಸೆಯುಂತಿಲ್ಲ. ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವ ನಿಟ್ಟಿನಲ್ಲಿ ಬಟ್ಟೆ ಬ್ಯಾಗುಗಳನ್ನು ಉಪಯೋಗಿಸುವುದರ ಮೂಲಕ ಪ್ಲಾಸ್ಟಿಕ್ ನಿಷೇಧ ಅಭಿಯಾನಕ್ಕೆ ಪಂಚಾಯಿತಿಯೊAದಿಗೆ ಕೈಜೋಡಿಸುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಪ್ಲಾಸ್ಟಿಕ್ ಬಳಕೆ ಕಂಡುಬAದರೆ ರೂ.೧೦೦೦. ರಿಂದ ೨೫೦೦೦. ರೂ ವರೆಗೆ ದಂಡ ವಿಧಿಸಲಾಗುವುದು. ಇದು ಅಂತಿಮ ಎಚ್ಚರಿಕೆಯಾಗಿದೆ ಎಂದು ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಎಚ್.ಎಸ್ ತಿಳಿಸಿದರು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಹಮ್ಮದ್ ಕುರೇಶಿ, ಪಿಡಿಓ ಚೋಂದಕ್ಕಿ, ಸದಸ್ಯರಾದ ಕುಲ್ಲೇಟಿರ ಅರುಣ್ ಬೇಬ, ಮಾಚೆಟ್ಟಿರ ಕುಶು ಕುಶಾಲಪ್ಪ, ಲಲಿತ, ಹೇಮಾವತಿ ಅರುಣ್, ಕುಮಾರ, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.