ಕೂಡಿಗೆ, ಜು. ೨೪: ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದ ಫಲಾನುಭವಿಗಳ ಮನೆಗಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಕೂಡಿಗೆ ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ನಿರ್ಮಾಣ ಮಾಡಿಕೊಂಡು ಹಕ್ಕು ಪತ್ರ ಪಡೆಯಲು ಕಂದಾಯ ಇಲಾಖೆಗೆ ೯೪ ಸಿ ಅಡಿ ಅರ್ಜಿಗಳನ್ನು ಕುಶಾಲನಗರ ನಾಡ ಕಚೇರಿಗೆ ಸಲ್ಲಿಸಿದ ಹಿನ್ನೆಲೆ ಕಂದಾಯ ಇಲಾಖೆಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಈ ಸಂದರ್ಭ ಕುಶಾಲನಗರ ನಾಡ ಕಚೇರಿಯ ಉಪ ತಹಶೀಲ್ದಾರ್ ಮಧುಸೂದನ್, ಲೆಕ್ಕಾಧಿಕಾರಿ ಗುರುದರ್ಶನ್ ಸೇರಿದಂತೆ ಇನ್ನಿತರರು ಹಾಜರಿದ್ದರು.