ಮಡಿಕೇರಿ, ಜು.೨೪: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ (ಒಕ್ಕಲಿಗ, ಲಿಂಗಾಯಿತ, ಕಾಡುಗೊಲ್ಲ, ಹಟ್ಟಿಗೊಲ್ಲ ಮತ್ತು ಮರಾಠ ನಿಗಮಗಳಡಿಯಲ್ಲಿ ಬರುವ ಸಮುದಾಯಗಳನ್ನು ಹೊರತುಪಡಿಸಿ) ಹಿಂದುಳಿದ ವರ್ಗಗಳ ಯುವ ಜನರಿಗೆ ಕೌಶಲ್ಯ ಅಭಿವೃದ್ಧಿ ಪಡಿಸಿ ಉದ್ಯೋಗ ಮುಖಿಯನ್ನಾಗಿಸಲು ಸರ್ಕಾರದ ಸಂಸ್ಥೆಗಳಾದ ಐಟಿಐ, ಜಿಟಿಟಿಸಿ, ಕೆಜಿಟಿಟಿಐ ರಲ್ಲಿ ಅಲ್ಪಾವಧಿ ಕೋರ್ಸುಗಳ ಮೂಲಕ ಕೌಶಲ್ಯ ತರಬೇತಿ ನೀಡಲು, ಕೌಶಲ್ಯ ಕರ್ನಾಟಕ ತಂತ್ರಾAಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
೧೦ನೇ ತರಗತಿ, ದ್ವಿತೀಯ ಪಿ.ಯು.ಸಿ, ಡಿಪ್ಲೋಮ, ಪದವಿ, ಎಂಜಿನಿಯರಿAಗ್ ವ್ಯಾಸಂಗ ಪೂರ್ಣಗೊಳಿಸಿರಬೇಕು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಲ್ಲಿ ನಮೂದಿಸಿದ ಈ ನಿಗಮಗಳ ವ್ಯಾಪ್ತಿಗೆ ಒಳಪಡುವ ಜಾತಿಗಳಿಗೆ ಸೇರಿದವರಾಗಿರಬೇಕು. ಅರ್ಜಿದಾರರ ವಯಸ್ಸು ೧೮ ರಿಂದ ೨೫ ವರ್ಷಗಳ ಒಳಗಿರಬೇಕು. ಪ್ರವರ್ಗ-೧ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಕುಟುಂಬದ ವಾರ್ಷಿಕ ವರಮಾನ/ ಆದಾಯ ಮಿತಿ ಇರುವುದಿಲ್ಲ. ಪ್ರವರ್ಗ-೨ಎ, ೩ಎ ಮತ್ತು ೩ಬಿ ಗೆ ಸೇರಿದ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ/ ಆದಾಯ ರೂ.೮ ಲಕ್ಷಗಳಿಗಿಂತ ಕಡಿಮೆ ಇರಬೇಕು.
ಅರ್ಜಿದಾರರು hಣಣಠಿs://ತಿತಿತಿ.ಞಚಿಡಿಟಿಚಿಣಚಿಞಚಿ.ಛಿom ಜಾಲತಾಣದೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು ಅಥವಾ ನಿಗಮಗಳ ವೆಬ್ಸೈಟ್ಗಳನ್ನು ಸಂಪರ್ಕಿಸಬಹುದು. hಣಣಠಿs://ತಿತಿತಿ.ಜbಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ (ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮ, hಣಣಠಿs://ತಿತಿತಿ.ಞಚಿಚಿಜ.ಞಚಿಡಿಟಿಚಿಣಚಿಞಚಿ.gov.iಟಿ (ಅಲೆಮಾರಿ ಅಭಿವೃದ್ಧಿ ನಿಗಮ), hಣಣಠಿs://ಞssಜ.ಞಚಿಡಿಟಿಚಿಣಚಿಞಚಿ.gov.iಟಿ (ಸವಿತಾ ಸಮಾಜ ಅಭಿವೃದ್ಧಿ ನಿಗಮ, hಣಣಠಿs://ಞmmಜ.ಞಚಿಡಿಟಿಚಿಣಚಿಞಚಿ.gov.iಟಿ (ಮಡಿವಾಳ ಅಭಿವೃದ್ಧಿ ನಿಗಮ), hಣಣಠಿs://uಠಿಠಿಠಿಚಿಡಿಚಿಜeveಟoಠಿmeಟಿಣ.ಞಚಿಡಿಟಿಚಿಣಚಿಞಚಿ.gov.iಟಿ (ಉಪ್ಪಾರ ಅಭಿವೃದ್ಧಿ ನಿಗಮ), hಣಣಠಿs://ಞvಛಿಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ (ವಿಶ್ವಕರ್ಮ ಅಭಿವೃದ್ಧಿ ನಿಗಮ), hಣಣಠಿs://ಚಿmbigಚಿಡಿಚಿಜeveಟoಠಿmeಟಿಣ.ಞಚಿಡಿಟಿಚಿಣಚಿಞಚಿ.gov.iಟಿ (ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ)ದ ವೆಬ್ಸೈಟನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗೆ ನಿಗಮದ ಕೇಂದ್ರ ಕಚೇರಿಯ ದೂರವಾಣಿ/ಸಹಾಯವಾಣಿ ಸಂ.೦೮೦-೨೨೩೭೪೮೩೨, ೯೬೦೬೦೬೬೩೮೯ ಮತ್ತು ೮೮೨೪೩೦೦೪೦೦ ಅಥವಾ ಜಿಲ್ಲಾ ಕಚೇರಿಯ ದೂ.ಸಂ.೦೮೨೭೨-೨೨೧೬೫೬ ನ್ನು ಸಂಪರ್ಕಿಸಬಹುದು. ಆನ್ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್, ೨೯ ರೊಳಗೆ ಸಲ್ಲಿಸಲು ಅವಕಾಶವಿದೆ.
ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸುವಂತಿಲ್ಲ. ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಚೇರಿಯ ಅವಧಿಯಲ್ಲಿ ಉಚಿತವಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ವ್ಯವಸ್ಥೆ ಇರುತ್ತದೆ ಎಂದು ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಮಹಾದೇವಿ ಅವರು ತಿಳಿಸಿದ್ದಾರೆ.