ನಾಪೋಕ್ಲು, ಜು. ೨೪: ಹೊದ್ದೂರು ಗ್ರಾಮ ಪಂಚಾಯಿತಿ ಕಾರ್ಯಾಲಯ ನಿರ್ಮಾಣ ಮಾಡಿದ ಗುತ್ತಿಗೆದಾರ ನೆರವಂಡ ಸಂಜಯ್ ಪೂಣಚ್ಚ, ಬಿಲ್ಲವರ ಎಲಿಯಣ್ಣ ಪೂಜಾರಿ ಅವರುಗಳನ್ನು ಹೊದ್ದೂರು ಗ್ರಾಮ ಪಂಚಾಯಿತಿ ಹಾಗೂ ಗ್ರಾಮಸ್ಥರ ಪರವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕುಸುಮಾವತಿ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಡಾ. ಜಗತ್ ತಿಮ್ಮಯ್ಯ, ಮಡಿಕೇರಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶೇಖರ್, ಪಿಡಿಓ ಅಬ್ದುಲ್ಲ್ಲಾ ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.