ಪೊನ್ನಂಪೇಟೆ, ಜು. ೨೪: ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ರಾಷ್ಟçಪತಿಯಾಗಿ ಆಯ್ಕೆ ಯಾದ ಹಿನ್ನೆಲೆ ಪೊನ್ನಂಪೇಟೆ ಶಕ್ತಿ ಕೇಂದ್ರದ ವತಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸುವ ಮೂಲಕ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭ ಪೊನ್ನಂಪೇಟೆ ಶಕ್ತಿ ಕೇಂದ್ರ ಪ್ರಮುಖರಾದ ಮೂಕಳೆರ ಮಧುಕುಮಾರ್, ಕೋಟೆರ ಕಿಶನ್, ತಾಲೂಕು ಬಿಜೆಪಿ ಉಪಾಧ್ಯಕ್ಷ ಶಾಮ್ ಪೂಣಚ್ಚ, ಜಿಲ್ಲಾ ಕೃಷಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಬೀರ್‌ದಾಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಭೀಮಯ್ಯ, ತಾಲೂಕು ಕೃಷಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ತೋರಿರ ವಿನು, ವೀರಾಜಪೇಟೆ ತಾಲೂಕು ಮಹಿಳಾ ಮೋರ್ಚಾ ಸಾಮಾಜಿಕ ಜಾಲತಾಣ ಪ್ರಮುಖರಾದ ಮೂಕಳೇರ ಕಾವ್ಯ ಮಧು, ಬಿಜೆಪಿ ಜಿಲ್ಲಾ ಸಮಿತಿ ಸದಸ್ಯೆ ರೇಖಾ ಶ್ರೀಧರ್, ಗ್ರಾ.ಪಂ. ಅಧ್ಯಕ್ಷೆ ಗಿರಿಜಾ ವೆಂಕಟೇಶ್, ಗ್ರಾ.ಪಂ. ಸದಸ್ಯರಾದ ವೆಂಕಟೇಶ್, ರಾಮಕೃಷ್ಣ, ವಿಮಲ, ಮಂಜುಳ, ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಸುನಂದ ಮತ್ತು ಅಶ್ವಿನಿ ಹಾಗೂ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.