ಮಡಿಕೇರಿ, ಜು. ೨೪: ೨೦೨೨-೨೩ನೇ ಸಾಲಿನ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷö್ಮ ಮತ್ತು ಅತೀಸೂಕ್ಷö್ಮ ಹಾಗೂ ಅರಣ್ಯ ಆಧಾರಿತ ಆದಿವಾಸಿಗಳ ಸಮುದಾಯ ಕೋಶದಿಂದ ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆಯಲ್ಲಿ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು), ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ ಈ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆಯಾಯ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿಯನ್ನು ವೆಬ್‌ಸೈಟ್ ವಿಳಾಸ hಣಣಠಿs://suviಜhಚಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಸಲ್ಲಿಸಬಹುದು. ಫಲಾಪೇಕ್ಷಿಗಳು ಆನ್‌ಲೈನ್ ಮೂಲಕ ಅರ್ಜಿ ಮತ್ತು ದಾಖಲಾತಿಗಳನ್ನು ಸುವಿದಾ ತಂತ್ರಾAಶದ ವೆಬ್‌ಸೈಟ್ hಣಣಠಿs://suviಜhಚಿ. ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅಪ್‌ಲೋಡ್ ಮಾಡಿ ಅರ್ಜಿಯನ್ನು ಆಗಸ್ಟ್ ೨೦ ರೊಳಗೆ ಕಚೇರಿಗೆ ಸಲ್ಲಿಸುವುದು. ಯೋಜನೆಗಳ ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‌ಸೈಟ್ hಣಣಠಿs://ಞmvsಣಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಪಡೆದುಕೊಳ್ಳುವುದು ಅಥವಾ ದೂ.೦೮೨೭೨-೨೨೮೮೫೭ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಜಿಲ್ಲಾ ವ್ಯವಸ್ಥಾಪಕ ಚಂದ್ರಶೇಖರ್ ತಿಳಿಸಿದ್ದಾರೆ.
ನೇಮಕಾತಿ ಪರೀಕ್ಷೆಗೆ
ಭಾರತ ಸರ್ಕಾರದ ಸ್ಟಾಫ್ ಸೆಲೆಕ್ಷನ್ ಕಮಿಷನ್ ವ್ಯಾಪ್ತಿಗೆ ಒಳಪಡುವ ಹೆಡ್ ಕಾನ್ಸ್ಟೇಬಲ್ (ಅಸಿಸ್ಟೆಂಟ್ ವಯರ್‌ಲೆಸ್ ಆಪರೇಟರ್(ಎಡಬ್ಲುö್ಯಒ)/ ಟೆಲಿ ಪ್ರಿಂಟರ್ ಆಪರೇಟರ್(ಟಿಪಿಒ) ಇನ್ ದೆಹಲಿ ಪೊಲೀಸ್ ಎಕ್ಸಾಮಿನೇಷನ್-೨೦೨೨ ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ತಾ. ೨೯ ಕೊನೆಯ ದಿನವಾಗಿದೆ. ಪಿ.ಯು.ಸಿ. ಉತ್ತೀರ್ಣರಾಗಿರಬೇಕು. ಜುಲೈ ೧ಕ್ಕೆ ಅನ್ವಯವಾಗುವಂತೆ ಕನಿಷ್ಟ ೧೮ ರಿಂದ ೨೭ ವರ್ಷಗಳು. ಖಾಲಿ ಹುದ್ದೆಗಳು ೮೫೭ (ಪುರುಷ-೫೭೩ ಮಹಿಳೆ-೨೮೪). ಶುಲ್ಕವನ್ನು ಪಾವತಿಸಲು ತಾ. ೨೯ ಕೊನೆಯ ದಿನವಾಗಿದೆ. ಆನ್‌ಲೈನ್/ ನೆಟ್ ಬ್ಯಾಂಕಿAಗ್ ಅಥವಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚಲನ್ ಮುಖಾಂತರ ಶುಲ್ಕ ಪಾವತಿ ಮಾಡಬಹುದಾಗಿದೆ. ಸಾಮಾನ್ಯ ವರ್ಗ, ಪ್ರವರ್ಗ-೨ಎ, ೨ಬಿ, ೩ಎ, ೩ಬಿ. ಗೆ ಸೇರಿದ ಅಭ್ಯರ್ಥಿಗಳಿಗೆ ರೂ. ೧೦೦. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿಡಬ್ಲುö್ಯಡಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ hಣಣಠಿs://ssಛಿ.ಟಿiಛಿ.iಟಿ, ಸ್ಟಾಫ್ ಸೆಲೆಕ್ಷನ್ ಕಮಿಷನ್ ಸಹಾಯವಾಣಿ-೦೮೦-೨೫೫೦೨೫೨೦, ೯೪೮೩೮೬೨೦೨೦ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಉಮಾ ತಿಳಿಸಿದ್ದಾರೆ.
ಶಿಷ್ಯವೇತನಕ್ಕೆ
ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ೨೦೨೨-೨೩ನೇ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ, ಡಿಪ್ಲೋಮಾ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶಿಷ್ಯವೇತನಕ್ಕಾಗಿ (ಹವಲ್ದಾರ್ ರ‍್ಯಾಂಕಿನ ಮೇಲಿನ ಮತ್ತು ಅಧಿಕಾರಿಗಳನ್ನು ಹೊರತುಪಡಿಸಿ) ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್, ೧೫ ಕೊನೆಯ ದಿನವಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕ ಮೇಜರ್ ಬಾಲಸುಬ್ರಮಣ್ಯಂ ತಿಳಿಸಿದ್ದಾರೆ.
ಪುಸ್ತಕ ಅನುದಾನ-ವಿಶೇಷ ಅನುದಾನಕ್ಕೆ
ಮಿಲಿಟರಿ ಪಿಂಚಣಿ ರಹಿತ ಕರ್ನಾಟಕ ಮಾಜಿ ಸೈನಿಕರ ಮತ್ತು ಹೊರ ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ೨೦೨೨-೨೩ನೇ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ, ಡಿಪ್ಲೋಮಾ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪುಸ್ತಕ ಅನುದಾನ ಹಾಗೂ ವಿಶೇಷ ಅನುದಾನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ ೧೫ ಕೊನೆಯ ದಿನವಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕ ಮೇಜರ್ ಬಾಲಸುಬ್ರಮಣ್ಯಂ ತಿಳಿಸಿದ್ದಾರೆ.
ಜನರಲ್ ಕೆ.ಎಸ್. ತಿಮ್ಮಯ್ಯ ನಗದು ಪ್ರಶಸ್ತಿಗೆ
೨೦೨೧-೨೨ನೇ ಸಾಲಿನಲ್ಲಿ ೧೦ನೇ ತರಗತಿ ಮತ್ತು ೨ನೇ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕಗಳನ್ನು ಪಡೆದ ಕರ್ನಾಟಕ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ‘ಜನರಲ್ ಕೆ.ಎಸ್. ತಿಮ್ಮಯ್ಯ’ ನಗದು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್ ೧೫ ಕೊನೆಯ ದಿನವಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಸಾಲ ಸೌಲಭ್ಯಕ್ಕೆ
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಪ್ರಸಕ್ತ (೨೦೨೨-೨೩ ನೇ) ಸಾಲಿನಲ್ಲಿ ಸಾಲ ಸೌಲಭ್ಯ ಒದಗಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಾಲ ಸೌಲಭ್ಯ ಪಡೆಯಲು ಇಚ್ಚಿಸುವವರು ನಿಗದಿತ ಅರ್ಜಿ ನಮೂನೆಗಳನ್ನು ಸುವಿಧಾ ಪೋರ್ಟಲ್ ತಿತಿತಿ.suviಜhಚಿ.ಞಚಿಡಿಟಿಚಿಣಚಿಞಚಿ. gov.iಟಿ ರ ಮೂಲಕವೇ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ ೨೦ ರೊಳಗೆ ಸಲ್ಲಿಸುವುದು.
ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವವರು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ ೧೮ ವರ್ಷಗಳಿಂದ ೫೫ ವರ್ಷಗಳ ಮಿತಿಯಲ್ಲಿರಬೇಕು. ನಿಗಮದ/ ಸರ್ಕಾರದ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರಿವು ಯೋಜನೆಯಡಿ ವಯೋಮಿತಿ ೧೮ ವರ್ಷಗಳಿಂದ ೩೦ ವರ್ಷಗಳ ಮಿತಿಯಲ್ಲಿರಬೇಕು. ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು ಹಾಗೂ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗಳಿಗೆ ಕುಟುಂಬದ ವಾರ್ಷಿಕ ವರಮಾನವು ಗ್ರಾಮಾಂತರ ಪ್ರದೇಶದವರಿಗೆ ರೂ. ೯೦ ಸಾವಿರಗಳು ಹಾಗೂ ಪಟ್ಟಣ ಪ್ರದೇಶದವರಿಗೆ ರೂ. ೧.೨೦ ಸಾವಿರ ಗಳಿಗಿಂತ ಕಡಿಮೆ ಇರಬೇಕು. ಅರಿವು ಶೈಕ್ಷಣಿಕ ನವೀಕರಣ ಯೋಜನೆಗೆ ವಾರ್ಷಿಕ ವರಮಾನವು ರೂ. ೩.೫೦ ಲಕ್ಷಗಳ ಮಿತಿಯೊಳಗಿರಬೇಕು. ಈ ಸೌಲಭ್ಯ ಪಡೆಯಲು ಇಚ್ಚಿಸುವ ಅರ್ಜಿದಾರರು hಣಣಠಿs://ಞvಛಿಜಛಿಟ. ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ ಸಂಖ್ಯೆ: ೦೮೦-೨೨೩೭೪೮೪೮ ಹಾಗೂ ಜಿಲ್ಲಾ ಕಚೇರಿಯ ದೂ. ೦೮೨೭೨-೨೨೧೬೫೬ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಆನ್‌ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಗಳನ್ನು, ದಾಖಲಾತಿಗಳೊಂದಿಗೆ ಆಗಸ್ಟ್ ೨೦ರೊಳಗೆ ಸುವಿಧಾ ತಂತ್ರಾAಶದ ಮುಖಾಂತರ ಸಲ್ಲಿಸಬೇಕು ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಕೆ. ಮಹಾದೇವಿ ತಿಳಿಸಿದ್ದಾರೆ.