ಸೋಮವಾರಪೇಟೆ, ಜು. ೨೪: ಸಿಪಿಐಎಂಎಲ್ ರೆಡ್ ಸ್ಟಾರ್ ಪಕ್ಷದ ೮ನೇ ಜಿಲ್ಲಾ ಸಮ್ಮೇಳನ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಸಮ್ಮೇಳನದ ಅಧ್ಯಕ್ಷತೆಯನ್ನು ಪಕ್ಷದ ರಾಜ್ಯ ಕಾರ್ಯದರ್ಶಿ ಬಿ. ರುದ್ರಯ್ಯ ವಹಿಸಿದ್ದರು. ಕೇಂದ್ರ ಸಮಿತಿ ಸದಸ್ಯ ಆರ್. ಮಾನಸಯ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡವರು, ರೈತ ಕಾರ್ಮಿಕರು, ಆದಿವಾಸಿಗಳು, ಅಲ್ಪಸಂಖ್ಯಾತರ ಪರ ಇಲ್ಲ; ಬಿಜಿಪಿ ಸರ್ಕಾರ ಸಂವಿಧಾನಾತ್ಮಕವಾಗಿ ಕಾರ್ಯ ನಿರ್ವಹಿಸುತಿಲ್ಲ ಎಂದು ಆರೋಪಿಸಿದರು.

ಇದರಿಂದಾಗಿ ಕಳೆದ ನಾಲ್ಕೆöÊದು ವರ್ಷಗಳಿಂದ ದೇಶವು ವಿರೋಚಿತ ಹೋರಾಟಗಳನ್ನು ಕಂಡಿದೆ. ಜನಸಾಮಾನ್ಯರ ಅನ್ನ ಆಹಾರ, ಸೂರು, ಮಹಿಳೆಯರ ಹಾಗೂ ಬಡವರ ರಕ್ಷಣೆ, ದೇಶದ ನೆಲ-ಜಲ ಸಂಪತ್ತಿನ ರಕ್ಷಣೆಯಲ್ಲಿ ಸರ್ಕಾರ ವಿಫಲವಾಗಿದೆ. ಆರ್‌ಎಸ್‌ಎಸ್ ಸೂಚನೆಯಂತೆ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಮತೋರ್ವ ಸದಸ್ಯ ಎಂ.ಡಿ. ಅಮೀರ್ ಆಲಿ ಮಾತನಾಡಿ, ತಿನ್ನುವ ಅನ್ನ-ಆಹಾರದ ಮೇಲೆ ಕೇಂದ್ರ ಸರ್ಕಾರ ಜಿಎಸ್‌ಟಿ ತೆರಿಗೆ ವಿಧಿಸುವ ಮೂಲಕ ಜನವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ದೂರಿದರು.

ಈ ಸಂದರ್ಭ ಪಕ್ಷದ ಕೊಡಗು ಜಿಲ್ಲಾ ಸಮಿತಿಯನ್ನು ಪನರ್‌ರಚನೆ ಮಾಡಲಾಯಿತು. ಜಿಲ್ಲಾ ಕಾರ್ಯದರ್ಶಿಯಾಗಿ ಎಸ್.ಆರ್. ಮಂಜುನಾಥ್ ಆಯ್ಕೆಯಾದರು. ಆಗಸ್ಟ್ ೩ ರಿಂದ ೫ರವರೆಗೆ ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಸಮ್ಮೇಳನಕ್ಕೆ ಪ್ರತಿನಿಧಿಗಳನ್ನು ನೇಮಕ ಮಾಡಲಾಯಿತು.