ಕುಶಾಲನಗರ, ಜು. ೨೪: ಸುಳ್ಯದಲ್ಲಿ ಹತ್ಯೆಯಾದ ಮಸೂದ್ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕು ಮುಸ್ಲಿಂ ಒಕ್ಕೂಟಗಳ ಕೇಂದ್ರ ಸಮಿತಿಯಿಂದ ಕುಶಾಲನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಸಂಘ ಪರಿವಾರದ ಮೂಲದವ ರಿಂದ ಮಸೂದ್ ಹತ್ಯೆಯಾಗಿದೆ ಎಂದು ಆರೋಪಿಸಿದ ಪ್ರತಿಭಟನಾ ಕಾರರು ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಘೋಷಣೆ ಕೂಗಿದರು.
ಈ ಸಂದರ್ಭ ಮಾತನಾಡಿದ ತಾಲೂಕು ಮುಸ್ಲಿಂ ಒಕ್ಕೂಟಗಳ ಅಧ್ಯಕ್ಷ ಅಬ್ದುಲ್ ಕರೀಂ, ಕ್ಷುಲ್ಲಕ ಕಾರಣಕ್ಕೆ ಹತ್ಯೆಯಾದ ಅಮಾಯಕ ಮಸೂದ್ ಕುಟುಂಬಕ್ಕೆ ಸರ್ಕಾರದಿಂದ ೨೫ ಲಕ್ಷ ರೂಗಳ ಎಂದು ಆರೋಪಿಸಿದ ಪ್ರತಿಭಟನಾ ಕಾರರು ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಘೋಷಣೆ ಕೂಗಿದರು.
ಈ ಸಂದರ್ಭ ಮಾತನಾಡಿದ ತಾಲೂಕು ಮುಸ್ಲಿಂ ಒಕ್ಕೂಟಗಳ ಅಧ್ಯಕ್ಷ ಅಬ್ದುಲ್ ಕರೀಂ, ಕ್ಷುಲ್ಲಕ ಕಾರಣಕ್ಕೆ ಹತ್ಯೆಯಾದ ಅಮಾಯಕ ಮಸೂದ್ ಕುಟುಂಬಕ್ಕೆ ಸರ್ಕಾರದಿಂದ ೨೫ ಲಕ್ಷ ರೂಗಳ ಪರಿಹಾರ ಒದಗಿಸುವುದರೊಂದಿಗೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಒಕ್ಕೂಟದ ಉಪಾಧ್ಯಕ್ಷ ಅಶ್ರಫ್, ಕಾರ್ಯದರ್ಶಿ ಜಕ್ರಿಯಾ, ಸಹ ಕಾರ್ಯದರ್ಶಿ ಶರೀಫ್, ಖಜಾಂಚಿ ಇರ್ಫಾನ್, ಸದಸ್ಯರಾದ ಜಲೀಲ್, ಶರೀಫ್, ಅಶ್ರಫ್, ಅದ್ದು, ಅಬ್ದುಲ್, ಪಾಶ ಮತ್ತಿತರರು ಇದ್ದರು.