ಮಡಿಕೇರಿ, ಜು.೨೪: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ/ ಸಂಸ್ಥೆಗಳಿಗೆ ರಾಷ್ಟç ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಚೈನ್‌ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಈ ಕಚೇರಿಯಿಂದ ಕಚೇರಿ ವೇಳೆಯಲ್ಲಿ ಪಡೆಯಬಹುದು. ಅಥವಾ ತಿತಿತಿ.ಜisಚಿbiಟiಣಥಿಚಿಜಿಜಿಚಿiಡಿs.gov.iಟಿ ವೆಬ್‌ಸೈಟ್‌ನಿಂದ ಪಡೆದು ನಿಗದಿತ ನಮೂನೆಯಲ್ಲಿ ಆಂಗ್ಲ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ೨ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು (ವೈಯಕ್ತಿಕ ವಿಭಾಗ), ಅರ್ಜಿದಾರ ವ್ಯಕ್ತಿಗಳ/ ಸಂಸ್ಥೆಗಳ ಸ್ವವಿವರ ಹಾಗೂ ಸಾಧನೆಗಳ ಸಾರಾಂಶ ಪೂರಕ ದಾಖಲೆಗಳೊಂದಿಗೆ ಹಾಗೂ ಡ್ರಾಪ್ಟ್ ಸೈಟೆಷನ್ (೧ ಪುಟಕ್ಕೆ ಮೀರದಂತೆ) ೩ ಪ್ರತಿಗಳಲ್ಲಿ (ತ್ರಿಪ್ರತಿಗಳು) ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರ ಕಚೇರಿಗೆ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಆಗಸ್ಟ್ ೨೦ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿಯ ದೂರವಾಣಿ ಸಂಖ್ಯೆ. ೦೮೨೭೨ ೨೯೫೮೨೯ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ.