ಮಡಿಕೇರಿ, ಜು. ೨೫: ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ ಸೆಪ್ಟೆಂಬರ್ ೧೧ ರಂದು ನಡೆಯುವ ಕಾಸರಗೋಡು ಜಿಲ್ಲಾ ೬ನೇ ಚುಟುಕು ಸಾಹಿತ್ಯ ಸಮ್ಮೇಳನ ಉದ್ಘಾಟನಾ ಸಮಾರಂಭದಲ್ಲಿ ಕಾಸರಗೋಡು ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಯ ಬರಹಗಾರರು, ಲೇಖಕರು, ಕವಿ, ಸಾಹಿತಿಗಳ ಹೊಸ ಕೃತಿಗಳ ಬಿಡುಗಡೆಗೆ ಅವಕಾಶ ಕಲ್ಪಿಸಲಾಗಿದೆ.

ಆಸಕ್ತರು ತಮ್ಮ ಕೃತಿಯ ಹೆಸರು, ಚುಟುಕು, ಸ್ವಪರಿಚಯ, ಕೃತಿಯ ಸಂಕ್ಷಿಪ್ತ ಮಾಹಿತಿಯೊಂದಿಗೆ ಐದು ಪ್ರತಿಯನ್ನು ಶಿವರಾಮ ಕಾಸರಗೋಡು, ಅಧ್ಯಕ್ಷರು ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಕನ್ನಡ ಗ್ರಾಮ ರಸ್ತೆ, ಕಾಸರಗೋಡು-೬೭೧೧೨೧ ಈ ವಿಳಾಸಕ್ಕೆ ಸಾಮಾನ್ಯ ಅಂಚೆ ಮೂಲಕ ಆಗಸ್ಟ್ ೧೫ರ ಒಳಗಾಗಿ ಕಳುಹಿಸಿಕೊಡಲು ಕೋರಲಾಗಿದೆ. ಮೊ. ೯೪೪೮೫೭೨೦೧೬ ಸಂಪರ್ಕಿಸಬಹುದಾಗಿದೆ.