(ಕೋವರ್ ಕೊಲ್ಲಿ ಇಂದ್ರೇಶ್) ಬೆAಗಳೂರು, ಜು. ೨೫: ಕೊಡಗು ಜಿಲ್ಲೆಯಲ್ಲಿ ೨೦೧೮ರ ನಂತರ ಸಂಭವಿಸುತ್ತಿರುವ ಭೂ ಕುಸಿತ ಮತ್ತು ಭೂಕಂಪನ ಕುರಿತು ನಿಖರ ಕಾರಣವನ್ನು ಪತ್ತೆ ಹಚ್ಚಿ ಮುಂದಾಗಬಹುದಾದ ಸಾವು ನೋವುಗಳನ್ನು ತಡೆಯುವ ಕುರಿತು ಸೂಕ್ತ ಕ್ರಮಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ರಿಟ್ ಅರ್ಜಿಯ ಸಂಬAಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟೀಸ್ ಜಾರಿಗೊಳಿಸಿದೆ.

ಬೆಂಗಳೂರಿನ ರಾಜಾಜಿನಗರದ ಸಾಮಾಜಿಕ ಕಾರ್ಯಕರ್ತೆ ಗೀತಾ ಮಿಶ್ರಾ ಎಂಬವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಾಧೀಶ ಅಲೋಕ್ ಅರಾಧೆ ಅವರಿದ್ದ ವಿಭಾಗೀಯ ಪೀಠ ಪ್ರತಿವಾದಿಗಳಿಗೆ ನೋಟೀಸ್ ಜಾರಿಗೊಳಿಸಿ ಮೂರು ವಾರಗಳಲ್ಲಿ ಉತ್ತರಿಸುವಂತೆ ಸೂಚನೆ ನೀಡಿದೆ. ಅಲ್ಲದೆ, ಕೊಡಗಿನ ಸಮಸ್ಯೆ ಬಗೆಹರಿಸುವ ಸಂಬAಧ ಕೈಗೊಂಡಿರುವ ಕ್ರಮಗಳ ಬಗ್ಗೆ ಸರಕಾರ ವಿವರ ನೀಡಬೇಕು ಎಂದು ನಿರ್ದೇಶನ ನೀಡಿ ವಿಚಾರಣೆಯನ್ನು ಸೆಪ್ಟೆಂಬರ್ ೧ಕ್ಕೆ ಮುಂದೂಡಿದೆ.

ಅರ್ಜಿದಾರರ ಪರ ವಕೀಲರಾದ ಜಿ.ಆರ್. ಮೋಹನ್ ಅವರು ಅರ್ಜಿಯಲ್ಲಿ ೨೦೧೮ರಲ್ಲಿ ಕೊಡಗಿನಲ್ಲಿ ಭಾರೀ ಮಳೆಯಿಂದಾಗಿ ಪ್ರಾಣ ಮತ್ತು ಅಪಾರ ಆಸ್ತಿ - ಪಾಸ್ತಿ ನಷ್ಟವಾಯಿತು. ಅದಾದ ನಂತರ ಪ್ರತಿ ವರ್ಷವೂ ಜಿಲ್ಲೆಯ ಕೆಲವೆಡೆ ಭೂ ಕುಸಿತ ಮತ್ತು ಭೂಕಂಪಗಳು ಸಂಭವಿಸುತ್ತಿದ್ದು ಜೀವ ಹಾಗೂ ಆಸ್ತಿ - ಪಾಸ್ತಿ ಹಾನಿ ಆಗುತ್ತಿದೆ. ಈ ಭೂಕುಸಿತದ ಕಾರಣವನ್ನು ವೈಜ್ಞಾನಿಕವಾಗಿ ಅಧ್ಯಯನ ನಡೆಸಲು ವಿಶೇಷ ತಂಡ ರಚಿಸಬೇಕು

(ಮೊದಲ ಪುಟದಿಂದ) ಮತ್ತು ಸಂಭವನೀಯ ಅನಾಹುತವನ್ನು ತಪ್ಪಿಸಲು ಮುಂದಾಗುವAತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಲಾಗಿದೆ.

ಇದಕ್ಕೆ ಜಿಲ್ಲಾಡಳಿತದ ನಿರ್ಲಕ್ಷö್ಯವೇ ಕಾರಣ, ಕೊಡಗು ಜಿಲ್ಲೆಯಲ್ಲಿ ಹಾನಿ ತಡೆಗೆ ಶಾಶ್ವತ ಕ್ರಮಕೈಗೊಳ್ಳುವಂತೆ ೨೦೨೦ರಲ್ಲಿಯೇ ಸರಕಾರಕ್ಕೆ ಮನವಿ ಸಲ್ಲಿಸಿದ್ದರೂ ಏನೂ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ. ಅಲ್ಲದೆ ಅರ್ಜಿಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಭೂ ವಿಜ್ಞಾನ ಅಧಿಕಾರಿಗಳನ್ನು ಹೊಣೆ ಮಾಡಲಾಗಿದೆ.

ಸಾರ್ವಜನಿಕ ರಿಟ್ ಅರ್ಜಿ ಕುರಿತು ಮಾತನಾಡಿದ ಸಾಮಾಜಿಕ ಕಾರ್ಯಕರ್ತೆ ಗೀತಾ ಮಿಶ್ರಾ, ಭೂಕಂಪ ಮತ್ತು ಭೂ ಕುಸಿತಕ್ಕೆ ಮರಳು ಗಣಿಗಾರಿಕೆ ಮತ್ತು ಅವೈಜ್ಞಾನಿಕ ಹೋಂ ಸ್ಟೇ, ರೆಸಾರ್ಟ್ ಕಟ್ಟಡಗಳ ನಿರ್ಮಾಣ, ಗುಡ್ಡಗಳಲ್ಲಿ ಮಣ್ಣಿನ ಅಗೆತವೇ ಮುಖ್ಯ ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಹೇಳಿದರು.

ಅಲ್ಲದೆ ಈ ಕುರಿತು ಅಧ್ಯಯನ ನಡೆಸಲು ೨೦೨೦ರ ಮಾರ್ಚ್ನಲ್ಲಿಯೇ ಅಂದಿನ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರೂ ಏನೂ ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ೨೦೨೦ರ ಆಗಸ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಿದರು. ಹೈ ಕೋರ್ಟಿನಲ್ಲಿ ಕೋವಿಡ್ ಕುರಿತ ವ್ಯಾಜ್ಯಗಳ ವಿಚಾರಣೆಗೆ ಆದ್ಯತೆ ನೀಡಿದ್ದರಿಂದ ತಾನು ಸಲ್ಲಿಸಿದ್ದ ಅರ್ಜಿಯು ವಿಚಾರಣೆಗೆ ಬರಲು ೨೩ ತಿಂಗಳು ತಡವಾಯಿತು ಎಂದರು. ಸರಕಾರ ವೈಜ್ಞಾನಿಕ ರೀತಿಯಲ್ಲಿ ಭೂಕಂಪ ಮತ್ತು ಭೂ ಕುಸಿತಕ್ಕೆ ಕಾರಣಗಳನ್ನು ಪತ್ತೆ ಮಾಡದ ಹಿನ್ನೆಲೆಯಲ್ಲಿ ಇದೀಗ ಮತ್ತೆ ಭೂಕಂಪನಗಳು ಆಗುತ್ತಿವೆ. ಮಳೆಗಾಲದಲ್ಲಿ ಪ್ರವಾಹ, ಭೂ ಕುಸಿತದ ನಡುವೆ ಭೂಮಿಯ ಕಂಪನ ಮುಂದುವರಿದಿದ್ದು ಜನರು ನೆಮ್ಮದಿಯ ಜೀವನ ನಡೆಸಲಾಗುತ್ತಿಲ್ಲ. ಸಂಬAಧಪಟ್ಟವರ ವಿರುದ್ಧ ಕ್ರಮಕೈಗೊಳ್ಳಲು ಸರಕಾರಕ್ಕೆ ಅಗತ್ಯ ನಿರ್ದೇಶನ ನೀಡಬೇಕೆಂದು ಕೋರಲಾಗಿದೆ. ಅಲ್ಲದೆ, ಮತ್ತೆ ಮತ್ತೆ ಭೂ ಕುಸಿತ ಸಂಭವಿಸುತ್ತಿರುವುದರಿAದ ಸಹಸ್ರಾರು ಮಂದಿಗೆ ತೊಂದರೆಯಾಗುತ್ತಿದೆ. ಇಡೀ ಜಿಲ್ಲೆಯ ಪರಿಸರದ ಮೇಲೂ ಪರಿಣಾಮಗಳಾಗುತ್ತಿವೆ. ಆದರೂ ಸರಕಾರ ಅದಕ್ಕೆ ವೈಜ್ಞಾನಿಕ ಕಾರಣಗಳನ್ನು ಅರಿಯಲು ಮುಂದಾಗಿಲ್ಲ. ಹಾಗಾಗಿ ಸರಕಾರಕ್ಕೆ ಅಗತ್ಯ ಸೂಚನೆಗಳನ್ನು ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಗೀತಾ ಮಿಶ್ರ ಅವರು ೨೫ ವರ್ಷಗಳಿಂದ ವಕೀಲಿ ವೃತ್ತಿ ಮಾಡುತಿದ್ದು ೨೦೧೫ ರಿಂದಲೂ ಸಾಮಾಜಿಕ ಕಾರಣಗಳ ಕುರಿತು ೧೨-೧೩ ಸಾರ್ವಜನಿಕ ಹಿತಾಸಕ್ತಿ ರಿಟ್ ಅರ್ಜಿಗಳನ್ನು ಸಲ್ಲಿಸಿದ್ದಾರೆ. ರಿಟ್ ಸಲ್ಲಿಕೆಗೂ ಮುನ್ನ ತಮ್ಮ ತಂಡವು ಸಾಕಷ್ಟು ಅಧ್ಯಯನ ಮಾಡಿರುತ್ತೇವೆ ಎಂದು ತಿಳಿಸಿದರು.

ಇದಲ್ಲದೆ ರಾಜ್ಯದಲ್ಲಿ ಕೇಂದ್ರದ ವಾರ್ತಾ ಮತ್ತು ಪ್ರಸಾರ ಇಲಾಖೆಯ ಸೂಚನೆಯಂತೆ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಖಾಸಗಿ ಟಿವಿ ಚಾನೆಲ್‌ಗಳಿಗೆ ಮಾನಿಟರಿಂಗ್ ಸಮಿತಿ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಬೇಕೆಂದು ಕೋರಿ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೆ ಟಿವಿ ಚಾನೆಲ್‌ಗಳು ಪ್ರಸಾರಿಸುವ ಸುದ್ದಿ ಕುರಿತು ಸಾರ್ವಜನಿಕರಿಂದ ಬರುವ ದೂರನ್ನು ಆಲಿಸಲು ಆಯಾ ಚಾನೆಲ್‌ಗಳು ನೋಡಲ್ ಆಫೀಸರ್‌ಗಳನ್ನೂ ನೇಮಿಸಬೇಕೆಂದು ಅರ್ಜಿಯಲ್ಲಿ ಕೋರಿದ್ದು ಇದೆಲ್ಲವೂ ವಿಚಾರಣೆಯ ಹಂತದಲ್ಲಿವೆ.