ಭಾಗಮಂಡಲ, ಜು. ೨೫ : ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜು ಭಾಗಮಂಡಲದ ೨೦೨೨-೨೩ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಸಂಸ್ಥೆಯ ಅಧ್ಯಕ್ಷರಾದ ಹೊಸೂರು ಸತೀಶ್ ಕುಮಾರ್ ಜೋಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿ ಗಳಲ್ಲಿ ರಾಜಕೀಯ ಪ್ರಜ್ಞೆ ಬೆಳೆಸಲು ಶಾಲಾ ಸಂಸತ್ತು ಚುನಾವಣೆ ಒಂದು ವೇದಿಕೆಯಾಗಿದೆ. ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅರುಣ ಪದವಿಪೂರ್ವ ಕಾಲೇಜು ಚೇರಂಬಾಣೆಯ ಪ್ರಾಂಶುಪಾಲ ಡಿ. ಯಸ್. ರಾಮಕೃಷ್ಣ ಅವರು ಮಾತನಾಡಿ ವಿದ್ಯಾರ್ಥಿ ನಾಯಕರು ನಾಯಕತ್ವ ಗುಣ ಬೆಳೆಸಿಕೊಳ್ಳುವುದರೊಂದಿಗೆ ಶಿಸ್ತು ಸಂಯಮವನ್ನು ಮೈಗೂಡಿಸಿಕೊಂಡು ಸಮಾಜದಲ್ಲಿ ಉತ್ತಮ ನಾಗರಿಕರಾಗಬೇಕೆಂದು ಕರೆ ನೀಡಿದರು. ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜು ಭಾಗಮಂಡಲದ ಪ್ರಾಂಶುಪಾಲರಾದ ದಿವಾಕರ ಕೆ. ಜೆ. ಮಾತನಾಡಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ನಿರ್ವಹಿಸಬೇಕಾದ ಕಾರ್ಯಗಳು ಮತ್ತು ಜವಾಬ್ದಾರಿಯ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ವಿದ್ಯಾಸಂಘದ ಕಾರ್ಯದರ್ಶಿ ಶ್ರೀ ನಿಡ್ಯಮಲೆ ರವೀಂದ್ರ, ನಿರ್ದೇಶಕರಾದ ಶ್ರೀ ನಂಜುAಡಪ್ಪ, ಶ್ರೀ ಮೊಟ್ಟನ ಜ್ಯೋತಿಶಂಕರ್ ಮತ್ತು ಶಿಕ್ಷಕಿ ಗೀತಾ ಭಾವೆ ಉಪಸ್ಥಿತರಿದ್ದರು. ಶಿಕ್ಷಕ ಶ್ರೀಕೃಷ್ಣ ಸ್ವಾಗತಿಸಿದರು. ಕಿಶೋರ್ ಕುಮಾರ್ ವಂದಿಸಿದರು. ಉಪನ್ಯಾಸಕ ಶಿವಪ್ಪ ನಿರೂಪಿಸಿದರು.
ಸಭೆಯಲ್ಲಿ ವಿದ್ಯಾಲಯದ ೬೩ ವರ್ಷಗಳ ಸಾಧನೆಯ ಹಿನ್ನೋಟವನ್ನು ಬಿಂಬಿಸುವ ಪ್ರಾತ್ಯಕ್ಷಿಕೆಯನ್ನು ಸಾದರಪಡಿಸಲಾಯಿತು.