ಸುಂಟಿಕೊಪ್ಪ, ಜು. ೨೫: ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆ ಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಇಲ್ಲಿನ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿಯ ಎಮ್ಮೆಗುಂಡಿ ತೋಟದ ಲೈನ್ ಮನೆಯಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಅಣ್ಣು ಮತ್ತು ಸುಮಿತ್ರ ದಂಪತಿಯ ಪುತ್ರಿ ಹರ್ಷಿತ (೧೬) ಸೋಮವಾರ ಶಾಲೆಗೆ ತೆರಳದೆ ಮನೆಯಲ್ಲಿದ್ದು ಪೋಷಕರು ಕೆಲಸಕ್ಕೆ ತೆರಳಿದ ಸಂದರ್ಭ ವೇಲಿನಿಂದ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.