*ಗೋಣಿಕೊಪ್ಪ, ಜು. ೨೫: ಗೋಣಿಕೊಪ್ಪ ಮುಖ್ಯರಸ್ತೆಯಲ್ಲಿನ ಏಕಮುಖ ಸಂಚಾರ ನಿಯಮ ಹಿಂಪಡೆಯಲು ಸ್ಥಳೀಯ ಗ್ರಾಮ ಪಂಚಾಯಿತಿ ಮತ್ತು ಚೇಂಬರ್ ಆಫ್ ಕಾಮರ್ಸ್ ಅಭಿಪ್ರಾಯದಂತೆ ಕ್ರಮಕೈಗೊಳ್ಳಲಾಗುವುದು ಎಂದು ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.
ಗೋಣಿಕೊಪ್ಪ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಆರ್‌ಎಂಸಿ ಆವರಣದಲ್ಲಿ ಶಾಸಕರನ್ನು ಭೇಟಿ ಮಾಡಿದ ಸಂದರ್ಭ ಮಾತನಾಡಿದ ಅವರು, ಏಕಮುಖ ಸಂಚಾರ ನಿಯಮ ಹಿಂಪಡೆಯಲು ಸ್ಥಳಿಯ ಗ್ರಾಮ ಪಂಚಾಯಿತಿ ತೆಗೆದುಕೊಳ್ಳುವ ನಿರ್ಧಾರ ಮುಖ್ಯವಾಗುತ್ತದೆ. ಗ್ರಾಮ ಪಂಚಾಯಿತಿ ಮತ್ತು ಚೇಂಬರ್ ಆಫ್ ಕಾಮರ್ಸ್ ಸಭೆ ನಡೆಸಿ, ವರದಿ ನೀಡಿದರೆ ಸರ್ಕಾರದ ಮಟ್ಟದಲ್ಲಿ ವ್ಯವಹರಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭ ಎಂಎಲ್‌ಸಿ ಸುಜಾ ಕುಶಾಲಪ್ಪ, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಸುನಿಲ್ ಮಾದಪ್ಪ, ಉಪಾಧ್ಯಕ್ಷ ಪೊನ್ನಿಮಾಡ ಸುರೇಶ್, ಕಾರ್ಯದರ್ಶಿ ಕಾಶಿ, ಪ್ರಮುಖರಾದ ಬಿ.ಎನ್. ಪ್ರಕಾಶ್, ಕೊಣಿಯಂಡ ಬೋಜಮ್ಮ, ಸಿ.ಕೆ. ಬೋಪಣ್ಣ, ಕಿಲನ್ ಗಣಪತಿ ಇದ್ದರು.