ನವದೆಹಲಿ, ಜು. ೨೫: ದೇಶದ ೧೫ನೇ ರಾಷ್ಟçಪತಿಯಾಗಿ ಒಡಿಶಾ ಮೂಲದ ದ್ರೌಪದಿ ಮುರ್ಮು ಅವರು ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು ನೂತನ ರಾಷ್ಟçಪತಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ೨೦೦೭ರಲ್ಲಿ ರಾಷ್ಟçಪತಿಯಾಗಿದ್ದ ಪ್ರತಿಭಾ ಪಾಟೀಲ್ ನಂತರ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಏರಿದ ಎರಡನೇ ಮಹಿಳೆ ಹಾಗೂ ಮೊದಲ ಬುಡಕಟ್ಟು ಜನಾಂಗದ ಮಹಿಳೆ ದ್ರೌಪದಿ ಮುರ್ಮು ಆಗಿದ್ದಾರೆ. ದೇಶದ ಉನ್ನತ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ವಯಸ್ಸಿನವರು ಎನಿಸಿಕೊಂಡಿದ್ದಾರೆ. ಉಪರಾಷ್ಟçಪತಿ, ರಾಜ್ಯಸಭೆಯ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ಮಂತ್ರಿಮAಡಲದ ಸದಸ್ಯರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜತಾಂತ್ರಿಕ ನಿಯೋಗಗಳು, ಸಂಸತ್ತಿನ ಸದಸ್ಯರು ಮತ್ತು ಭಾರತ ಸರ್ಕಾರದ ಪ್ರಧಾನ ಸಿವಿಲ್ ಮತ್ತು ಮಿಲಿಟರಿ ಅಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.
ಲೋಕಸಭೆ ಕಲಾಪಕ್ಕೆ ಅಡ್ಡಿ: ನಾಲ್ವರು ಕಾಂಗ್ರೆಸ್ ಸಂಸದರು ಅಮಾನತು
ನವದೆಹಲಿ, ಜು. ೨೫: ಬೆಲೆ ಏರಿಕೆ ಖಂಡಿಸಿ ಸದನದೊಳಗೆ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸುವ ಮೂಲಕ ಕಲಾಪಕ್ಕೆ ಅಡ್ಡಿಪಡಿಸಿದ ನಾಲ್ವರು ಕಾಂಗ್ರೆಸ್ ಸಂಸದರನ್ನು ಲೋಕಸಭೆಯಿಂದ ಇಡೀ ಅಧಿವೇಶನದ ಅವಧಿಗೆ ಅಮಾನತು ಮಾಡಲಾಗಿದೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸದಸ್ಯರಿಗೆ ಪ್ರತಿಭಟನೆ ನಡೆಸಲು ಬಯಸಿದರೆ ಸದನದ ಹೊರಗೆ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸುವಂತೆ ಸೂಚಿಸಿದರು. ಆದರೂ ಸದನದಲ್ಲೇ ನಿರಂತರ ಪ್ರತಿಭಟನೆ ನಡೆಸಿದ್ದರಿಂದ ಆಕ್ರೋಶಗೊಂಡ ಸ್ಪೀಕರ್, ನಾಲ್ವರು ಕಾಂಗ್ರೆಸ್ ಸಂಸದರು ಇಡೀ ಅಧಿವೇಶನದಲ್ಲಿ ಭಾಗಿಯಾಗದಂತೆ ಅಮಾನತು ಮಾಡಿದರು. ಅಮಾನತುಗೊಂಡಿರುವ ಕಾಂಗ್ರೆಸ್ ಸಂಸದರೆAದರೆ ಮಾಣಿಕಂ ಟ್ಯಾಗೋರ್, ಜೋತಿಮಣಿ, ರಮ್ಯಾ ಹರಿದಾಸ್ ಮತ್ತು ಟಿಎನ್ ಪ್ರತಾಪನ್. ಸ್ಪೀಕರ್ ಕ್ರಮದ ನಂತರ ನಾಲ್ವರು ಸಂಸದರು ಸಂಸತ್ ಮೈದಾನದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ತೆರಳಿ ಘೋಷಣೆಗಳನ್ನು ಕೂಗಿದರು. ಕೆಲವರನ್ನು ಅಮಾನತು ಮಾಡುವ ಮೂಲಕ ಸರ್ಕಾರ ನಮ್ಮ ಸಂಸದರನ್ನು ಬೆದರಿಸಲು ಪ್ರಯತ್ನಿಸುತ್ತಿದೆ. ಆದರೆ ನಮ್ಮ ಸಂಸದರು ಜನರ ಸಮಸ್ಯೆ ಬಗ್ಗೆ ಪ್ರಸ್ತಾಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಮಧ್ಯಾಹ್ನ ೩ ಗಂಟೆಯ ನಂತರ ಅಧಿವೇಶನ ಪುನರಾರಂಭಗೊAಡಾಗ ವಿರೋಧ ಪಕ್ಷದ ಸಂಸದರು ಭಿತ್ತಿಪತ್ರಗಳೊಂದಿಗೆ ಮರಳಿ ಪ್ರತಿಭಟನೆ ನಡೆಸಿದರು. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಪ್ರತಿಪಕ್ಷಗಳ ಸಂಸದರ ವರ್ತನೆಯನ್ನು ಖಂಡಿಸಿದರು. ಮತ್ತೊಮ್ಮೆ ಸದನದೊಳಗೆ ಫಲಕಗಳನ್ನು ತಂದ ಸಂಸದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಪೀಕರ್ಗೆ ಮನವಿ ಮಾಡಿದರು. ಭಿತ್ತಿಪತ್ರಗಳು ಮತ್ತು ಬ್ಯಾನರ್ಗಳನ್ನು ಹಿಡಿದು ಪ್ರತಿಭಟಿಸಿದ ವಿರೋಧ ಪಕ್ಷದ ಸಂಸದರು, ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿಗೆ ಬಂದು ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸರಕು ಮತ್ತು ಸೇವಾ ತೆರಿಗೆ ಅಥವಾ ಅಗತ್ಯ ವಸ್ತುಗಳ ಮೇಲಿನ ಜಿಎಸ್ಟಿ ಹೆಚ್ಚಳದ ಬಗ್ಗೆ ತಮ್ಮ ಕಳವಳವನ್ನು ಪರಿಹರಿಸಬೇಕೆಂದು ಒತ್ತಾಯಿಸಿದರು. “ನೀವು ಫಲಕಗಳನ್ನು ತೋರಿಸಲು ಬಯಸಿದರೆ, ಅದನ್ನು ಸದನದ ಹೊರಗೆ ಮಾಡಿ. ನಾನು ಚರ್ಚೆಗೆ ಸಿದ್ಧನಿದ್ದೇನೆ, ಆದರೆ ನನ್ನ ಹೃದಯವಂತಿಕೆಯನ್ನು ದೌರ್ಬಲ್ಯ ಎಂದು ಭಾವಿಸಬೇಡಿ” ಎಂದು ಸ್ಪೀಕರ್ ಹೇಳಿದರು. ಬಳಿಕ ಕಲಾಪವನ್ನು ತಾ.೨೬ರಕ್ಕೆೆ ಮುಂದೂಡಿದರು.
ರಾಜ್ಯಸಭಾ ಸ್ಥಾನದ ಭರವಸೆ ನೀಡುತ್ತಿದ್ದ ನಾಲ್ವರನ್ನು ಬಂಧಿಸಿದ ಸಿಬಿಐ
ನವದೆಹಲಿ, ಜು. ೨೫: ರಾಜ್ಯಸಭಾ ಸ್ಥಾನ ಮತ್ತು ರಾಜ್ಯಪಾಲರ ಹುದ್ದೆ ಕೊಡಿಸುವುದಾಗಿ ಸುಳ್ಳು ಭರವಸೆ ನೀಡಿ ೧೦೦ ಕೋಟಿ ರೂಪಾಯಿ ವಂಚಿಸಲು ಯತ್ನಿಸಿದ ಆರೋಪದ ಮೇಲೆ ಸಿಬಿಐ ಬಹು ರಾಜ್ಯಗಳ ವಂಚಕರ ಜಾಲವನ್ನು ಭೇದಿಸಿದ್ದು, ನಾಲ್ವರನ್ನು ಬಂಧಿಸಿದೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬAಧಿಸಿದAತೆ ಇತ್ತೀಚೆಗೆ ಸಿಬಿಐ ಶೋಧ ನಡೆಸಿದ್ದು, ಗ್ಯಾಂಗ್ನ ನಾಲ್ವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಶೋಧ ಕಾರ್ಯಾಚರಣೆ ವೇಳೆ ಆರೋಪಿಯೊಬ್ಬ ಸಿಬಿಐ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಬಿಐ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ಆತನ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬAಧಿಸಿದAತೆ ಸಿಬಿಐ ತನ್ನ ಎಫ್ಐಆರ್ನಲ್ಲಿ ಮಹಾರಾಷ್ಟ್ರದ ಲಾತೂರ್ನ ಕಮಲಾಕರ್ ಪ್ರೇಮಕುಮಾರ್ ಬಂಡಗರ್, ಕರ್ನಾಟಕದ ಬೆಳಗಾವಿಯ ರವೀಂದ್ರ ವಿಠಲ್ ನಾಯಕ್ ಮತ್ತು ದೆಹಲಿ-ಎನ್ಸಿಆರ್ ಮೂಲದ ಮಹೇಂದ್ರ ಪಾಲ್ ಅರೋರಾ, ಅಭಿಷೇಕ್ ಬೂರಾ ಮತ್ತು ಮೊಹಮ್ಮದ್ ಐಜಾಜ್ ಖಾನ್ ಅವರನ್ನು ಹೆಸರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತೋರ್ವ ಶಂಕಿತ ಎಲ್ಇಟಿ ಉಗ್ರನ ಬಂಧನ, ನಾಲ್ವರು ವಶಕ್ಕೆ
ಬೆಂಗಳೂರು, ಜು. ೨೫: ರಾಜ್ಯದ ಪೊಲೀಸರು ಬೆಂಗಳೂರಿನಲ್ಲಿ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಶಂಕಿತ ಲಷ್ಕರ್ ಇ- ತೊಯ್ಬಾ ಸಂಘಟನೆಯ ಓರ್ವ ಉಗ್ರ ಹಾಗೂ ಮತ್ತಿತರ ನಾಲ್ವರನ್ನು ಬಂಧಿಸಲಾಗಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ. ಆಂತರಿಕ ಭದ್ರತಾ ವಿಭಾಗ (ಐಎಸ್ಡಿ) ಮತ್ತು ಗುಪ್ತಚರ ವಿಭಾಗದ ಸಮನ್ವಯದಲ್ಲಿ ಸಿಸಿಬಿ ವಿಶೇಷ ವಿಭಾಗ ದೊರೆತ ಖಚಿತ ಮಾಹಿತಿ ಆಧಾರದ ಮೇಲೆ ಅಸ್ಸಾಂನಿAದ ಬಂದಿದ್ದ ಅಖ್ತರ್ ಹುಸೇನ್ ಲಷ್ಕರ್ ಎಂಬ ಶಂಕಿತ ಉಗ್ರನ ನಿವಾಸದ ಮೇಲೆ ದಾಳಿ ನಡೆಸಿದೆ. ೩೦ಕ್ಕೂ ಹೆಚ್ಚು ಸಿಬ್ಬಂದಿಯನ್ನೊಳಗೊAಡ ತಂಡದಿAದ ಈ ಕಾರ್ಯಾಚರಣೆ ನಡೆದಿದೆ. ಶಂಕಿತ ಭಯೋತ್ಪಾದಕ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದು, ತಿಲಕನಗರ ಸಮೀಪ ಇತರರೊಂದಿಗೆ ವಾಸವಾಗಿದ್ದ ಎನ್ನಲಾಗಿದೆ. ತಿಲಕನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಐವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.