ಮಡಿಕೇರಿ, ಜು. ೨೫: ಕಸ್ತೂರಿ ರಂಗನ್ ವರದಿಯ ಅಧಿಸೂಚನೆ ವಿರೋಧಿಸಿ ಈ ಹಿಂದಿನಿAದಲೂ ಹೋರಾಟ ನಡೆಸುತ್ತಿರುವ ಕರ್ನಾಟಕ ಬೆಳೆಗಾರರ ಒಕ್ಕೂಟ (ಕೆ.ಜಿ.ಎಫ್.) ತಾ. ೨೮ ರಂದು ಕರೆ ನೀಡಿದ್ದ ಸ್ವಯಂ ಘೋಷಿತ ಬಂದ್ ಕರೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಈ ಬಗ್ಗೆ ಕೆ.ಜಿ.ಎಫ್. ಅಧ್ಯಕ್ಷ ಡಾ. ಹೆಚ್.ಟಿ. ಮೋಹನ್ ಕುಮಾರ್ ಹಾಗೂ ಪ್ರ. ಕಾರ್ಯದರ್ಶಿ ಕೆ.ಬಿ. ಕೃಷ್ಣಪ್ಪ ಪ್ರಕಟಣೆ ನೀಡಿದ್ದಾರೆ.
ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಸ್ವಯಂ ಬಂದ್ಗೆ ತೀರ್ಮಾನಿಸಲಾಗಿತ್ತು. ಇದೀಗ ರಾಜ್ಯ ಸರಕಾರ ಕ್ಯಾಬಿನೆಟ್ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಇದನ್ನು ಮುಂದೂಡಲಾಗಿದೆ. ಮುಂದಿನ ನಡೆ ಗಮನಿಸಿ ತೀರ್ಮಾನಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.
ರಾಜ್ಯ ಸರಕಾರ ಈ ಬಗ್ಗೆ ಕ್ಯಾಬಿನೆಟ್ ತೀರ್ಮಾನ ಕೈಗೊಂಡಿರುವುದರಿAದ ಬಂದ್ ಕರೆ ಬೇಡ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಅವರು ಮನವಿ ಮಾಡಿದ್ದಾರೆ.