ಮಡಿಕೇರಿ, ಜು.೨೫: ಶಿವಮೊಗ್ಗದ ಸಾಗರ ಇರುವಕ್ಕಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಸಂಯುಕ್ತಾಶ್ರ‍್ರಯದಲ್ಲಿ ಅರಣ್ಯ ಮಹಾವಿದ್ಯಾಲಯ ಮತ್ತು ವಸತಿ ನಿಲಯಗಳ ವಾರ್ಷಿಕೋತ್ಸವ ಸಮಾರಂಭವು ತಾ. ೨೭ ರಂದು ಮಧ್ಯಾಹ್ನ ೩.೩೦ ಗಂಟೆಗೆ ಅರಣ್ಯ ಮಹಾವಿದ್ಯಾಲಯದಲ್ಲಿ ನಡೆಯಲಿದೆ.

ಶಿವಮೊಗ್ಗದ ಸಾಗರ, ಇರುವಕ್ಕಿ ಕೆ.ಶಿ.ನಾ.ಕೃ.ತೋ.ವಿ.ವಿ, ಕುಲಪತಿಗಳಾದ ಡಾ.ಆರ್.ಸಿ.ಜಗದೀಶ, ಶಿಕ್ಷಣ ನಿರ್ದೇಶಕರಾದ ಡಾ.ಎಂ.ಹನುಮAತಪ್ಪ, ಗೌರವಾನ್ವಿತ ಕುಲಸಚಿವರಾದ ಡಾ.ಆರ್.ಲೋಕೇಶ, ಡೀನ್ (ವಿದ್ಯಾರ್ಥಿ ಕಲ್ಯಾಣ) ಡಾ.ಎನ್.ಶಿವಶಂಕರ್, ಕೊಡಗು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ಎನ್.ಮೂರ್ತಿ, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಡೀನ್(ಅರಣ್ಯ) ಡಾ.ಸಿ.ಜಿ.ಕುಶಾಲಪ್ಪ, ಇತರರು ಪಾಲ್ಗೊಳ್ಳಲಿದ್ದಾರೆ.