* ರೂ. ೬ ಕೋಟಿ ಬಿಡುಗಡೆ

* ಪ್ರಸ್ತಾವನೆಗೆ ಜಿಲ್ಲಾಧಿಕಾರಿಗಳಿಗೆ ಪತ್ರ

ಮಡಿಕೇರಿ, ಜು. ೨೫: ರಾಜ್ಯದಲ್ಲಿ ಸಾರ್ವಜನಿಕ ಸ್ಮಶಾನ ಸೌಲಭ್ಯ ಕಲ್ಪಿಸುವ ಸಲುವಾಗಿ ಸರಕಾರಿ ಜಮೀನು ಲಭ್ಯವಿಲ್ಲದ ಗ್ರಾಮಗಳಲ್ಲಿ ಖಾಸಗಿ ಭೂಮಾಲೀಕರಿಂದ ಅಗತ್ಯ ಜಮೀನು ಖರೀದಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಜಾಗವನ್ನು ಪಡೆದು ಖರೀದಿಸಲು ರೂ. ೬ ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ರಾಜ್ಯದ ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಾರ್ವಜನಿಕ ಸ್ಮಶಾನಕ್ಕೆ ಜಾಗ: ಲಭ್ಯ ಇಲ್ಲದಿದ್ದರೆ ಖಾಸಗಿಯಿಂದ ಖರೀದಿ

(ಮೊದಲ ಪುಟದಿಂದ) ಈ ಹಿಂದೆ ರಾಜ್ಯ ಉಚ್ಚ ನ್ಯಾಯಾಲಯವು ೨೦.೦೮.೨೦೧೯ ರಂದು ನೀಡಿದ ಆದೇಶವನ್ನು ಅನುಷ್ಠಾನಗೊಳಿಸಬೇಕಾಗಿದೆ. ಆದ್ದರಿಂದ ರಾಜ್ಯದಲ್ಲಿ ಸಾರ್ವಜನಿಕ ಸ್ಮಶಾನ ಸೌಲಭ್ಯ ಕಲ್ಪಿಸುವ ಉದ್ದೇಶಕ್ಕಾಗಿ ಸರಕಾರಿ ಜಮೀನು ಲಭ್ಯವಿಲ್ಲದ ಗ್ರಾಮಗಳಲ್ಲಿ ಖಾಸಗಿ ಭೂ ಮಾಲೀಕರಿಂದ ಅಗತ್ಯ ಜಮೀನನ್ನು ಖರೀದಿಸಲು ಅನುದಾನ ಕೋರಿ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಸರಕಾರದ ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆ (ಭೂ ಮಂಜೂರಾತಿ) ಸಿ. ಬಲರಾಮ್ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.