ಮಡಿಕೇರಿ, ಜು.೨೬: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮಡಿಕೇರಿ ಪ್ರಾದೇಶಿಕ ಕೇಂದ್ರ ಕಚೇರಿಯಲ್ಲಿ ೨೦೨೨-೨೩ನೇ ಶೈಕ್ಷಣಿಕ ಸಾಲಿನ ವಿವಿಧ ವಿಷಯಗಳಿಗೆ ಪ್ರವೇಶಾತಿ ಪ್ರಕ್ರಿಯೆಗಳು ಆರಂಭವಾಗಿದ್ದು, ಈ ಸದುಪಯೊಗವನ್ನು ಉದ್ಯೋಗಸ್ಥರು ಹಾಗೂ ವಿದ್ಯಾರ್ಥಿಗಳು ಪಡೆದು ಕೊಳ್ಳುವಂತೆ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ.
ಪ್ರಾದೇಶಿಕ ಕೇಂದ್ರ ಕಚೇರಿಯು ಸಾರ್ವತ್ರಿಕ ರಜಾ ದಿನಗಳಾದ ಎರಡನೇ ಶನಿವಾರ ಹಾಗೂ ನಾಲ್ಕನೇ ಶನಿವಾರ ಮತ್ತು ಭಾನುವಾರಗಳಂದು ಸಹ ಕಾರ್ಯನಿರ್ವಹಿಸುತ್ತದೆ ಎಂದು ಅವರು ತಿಳಿಸಿದ್ದಾರೆ. ಆಟೋ ಮತ್ತು ಕ್ಯಾಬ್ ಚಾಲಕರು ಹಾಗೂ ಮಕ್ಕಳಿಗೆ ಶೇ.೩೦, ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಶೇ.೧೫, ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಶೇ.೧೫ ವಿನಾಯಿತಿ ನೀಡಲಾಗುತ್ತಿದೆ ಹಾಗೂ ಕೊರೊನಾ ಸಾಂಕ್ರಾಮಿಕ ರೋಗದಿಂದ ಮೃತರಾದ ಪೋಷಕರ ಮಕ್ಕಳಿಗೆ, ತೃತೀಯ ಲಿಂಗಿಗಳಿಗೆ, ದೃಷ್ಠಿಹೀನ ವಿದ್ಯಾರ್ಥಿಗಳಿಗೆ (ಬಿ.ಎಡ್-ಎಂಬಿಎ ಹೊರತುಪಡಿಸಿ) ಪೂರ್ಣ ಶುಲ್ಕ ವಿನಾಯಿತಿ ನೀಡಲಾಗಿದೆ.
ಸ್ನಾತಕ ಕೋರ್ಸ್ಗಳು: ಬಿ.ಎ, ಬಿ.ಕಾಂ, ಬಿ.ಲಿಬ್, ಬಿಬಿಎ, ಬಿಸಿಎ, ಬಿಎಸ್ಸಿ., ಸ್ನಾತಕೋತ್ತರ ಕೋರ್ಸ್ಗಳು:- ಎಂಎ, ಎಂಕಾA, ಎಂಬಿಎ, ಎಂಲಿಬ್, ಎಂಎಸ್ಸಿ ಹಾಗೂ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳು. ಪೂರ್ಣಾವಧಿಯಲ್ಲಿ (ಭೌತಿಕಶಿಕ್ಷಣ) (ಖeguಟಚಿಡಿ) ಒಂದು ಕೋರ್ಸ್ ಮತ್ತು ದೂರ ಶಿಕ್ಷಣದಲ್ಲಿ (ಔಠಿeಟಿ Uಟಿiveಡಿsiಣಥಿ) ಇನ್ನೊಂದು ಕೋರ್ಸ್ ಅನ್ನು ಏಕಕಾಲದಲ್ಲಿ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ.
ಆನ್ಲೈನ್ ಮುಖಾಂತರ ಇ-ಲರ್ನಿಂಗ್ ಮೆಟೀರಿಯಲ್ ಪಡೆಯುವ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಶೇ. ೧೫ ರಿಯಾಯಿತಿ ನೀಡಲಾಗುತ್ತಿದೆ. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಪ್ರವೇಶಾತಿ ಕಲ್ಪಿಸಲಾಗಿದೆ. ಒಬಿಸಿ ವಿದ್ಯಾರ್ಥಿಗಳಿಗೂ ಸ್ಕಾಲರ್ಶಿಪ್ ಪ್ರವೇಶಾತಿ ಕಲ್ಪಿಸಲಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಪ್ರವೇಶಾತಿ ಸೌಲಭ್ಯ ಒದಗಿಸಲಾಗಿದೆ.
ಹೆಚ್ಚಿನ ವಿವರಗಳಿಗೆ ಪ್ರಾದೇಶಿಕ ನಿರ್ದೇಶರ ಕಚೇರಿ, ಕರಾಮುವಿ ಪ್ರಾದೇಶಿಕ ಕೇಂದ್ರ, ಸರಕಾರಿ ಜೂನಿಯರ್ ಕಾಲೇಜು ಆವರಣ, ಹಳೇ ಪ್ರಾಥಮಿಕ ಶಾಲಾ ಕಟ್ಟಡ ಮಡಿಕೇರಿ-೫೭೧೨೦೧, ದೂ.ಸಂ. ೮೦೭೩೩೪೨೩೧೦, ೭೬೧೮೭೬೩೬೫೪, ೭೪೦೬೦೭೫೨೧೨ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರಾದ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ.