ಮಡಿಕೇರಿ, ಜು.೨೬: ಇದೇ ಆಗಸ್ಟ್ ೨೮ ರವರೆಗೆ ಪ್ರತೀ ಭಾನುವಾರದಂದು ಎರಡು ಗಂಟೆಗಳ ಕಾಲ ಏಕಕಾಲದಲ್ಲಿ ಯೋಗಾಭ್ಯಾಸದ ಮೂಲಕ ವಿಶ್ವ ದಾಖಲೆ ನಿರ್ಮಿಸುವ ನಿಟ್ಟಿನಲ್ಲಿ ಯೋಗಥಾನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ಸಂಬAಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಸಿ.ಸತೀಶ ಅವರು ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಏಕಕಾಲದಲ್ಲಿ ಯೋಗ ಪ್ರದರ್ಶನ ನೀಡುವ ಮೂಲಕ ರಾಷ್ಟಾçದ್ಯಂತ ವಿಶ್ವ ದಾಖಲೆ ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ. ಆ ನಿಟ್ಟಿನಲ್ಲಿ ಯೋಗ ತರಬೇತಿ ಹೊಂದಿರುವ ಹಾಗೂ ಪ್ರಮಾಣ ಪತ್ರ ಇರುವ ಶಿಕ್ಷಕರನ್ನು ಬಳಸಿಕೊಂಡು ಪ್ರತೀ ಭಾನುವಾರದಂದು ಎರಡು ಗಂಟೆಗಳ ಕಾಲ ಯೋಗ ಪ್ರದರ್ಶನ ಏರ್ಪಡಿಸಬೇಕಿದೆ. ಆ ನಿಟ್ಟಿನಲ್ಲಿ ಸಂಬAಧಪಟ್ಟ ಇಲಾಖೆಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.

ಯೋಗಥಾನ್ ಕಾರ್ಯಕ್ರಮದಲ್ಲಿ ಆಸಕ್ತರು ಪಾಲ್ಗೊಂಡು ಯೋಗಥಾನ್ ಕಾರ್ಯಕ್ರಮ ಯಶಸ್ಸುಗೊಳಿಸುವಲ್ಲಿ ಮುಂದಾಗಬೇಕು ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ ಯೋಗ ಶಿಕ್ಷಕರಾದ ಅಮೃತ್, ಜಿಲ್ಲಾ ಆಯುಷ್ ಅಧಿಕಾರಿ ರೇಣುಕಾ ದೇವಿ, ಆಯುಷ್ ವಾಹಿನಿಯ ಪ್ರತಿನಿಧಿ ತೇಜಸ್ ಪಾಪಯ್ಯ ಅವರು ಯೋಗಥಾನ್ ಕಾರ್ಯಕ್ರಮ ಸಂಬAಧಿಸಿದAತೆ ಮಾಹಿತಿ ನೀಡಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.