ಸಿದ್ದಾಪುರ, ಜು. ೨೬ : ನೆಲ್ಲಿಹುದಿಕೇರಿಯ ಶ್ರೀ ಮುತ್ತಪ್ಪ ಯುವ ಕಲಾ ಸಂಘದ ವತಿಯಿಂದ ಕಾರ್ಗಿಲ್ ವಿಜಯ್ ದಿವಸ್ ಪ್ರಯುಕ್ತ ನೆಲ್ಲಿಹುದಿಕೇರಿ ವ್ಯಾಪ್ತಿಯ ಮಾಜಿ ಯೋಧರು ಹಾಗೂ ಹಾಲಿ ಯೋಧರಿಗೆ ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮವನ್ನು ಮಾಜಿ ಯೋಧರ ಸಂಘದ ಜಿಲ್ಲಾಧ್ಯಕ್ಷ ಮೇ. ಸೋಮಣ್ಣ ಉದ್ಘಾಟಿಸಿದರು. ನೆಲ್ಲಿಹುದಿಕೇರಿ ಗ್ರಾಮದಲ್ಲಿ ವಾಸವಿರುವ ನಿವೃತ್ತ ಯೋಧರು ಹಾಗೂ ಪ್ರಸ್ತುತ ಸೇವೆಯಲ್ಲಿರುವ ಸುಮಾರು ೩೨ ಮಂದಿ ಯೋಧರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು. ಈ ಸಂದÀರ್ಭ ಶ್ರೀ ಮುತ್ತಪ್ಪ ಸಂಘದ ಅಧ್ಯಕ್ಷ ಶರಣ್, ಕಾರ್ಯದರ್ಶಿ ವಿನೋದ್, ಖಜಾಂಚಿ ಶಿಂಜಿತ್, ಉಪಾಧ್ಯಕ್ಷ ಪ್ರಣವ್, ಕೆ.ಪಿ.ಎಸ್. ಶಾಲೆಯ ಉಪಾಧ್ಯಕ್ಷ ಪಿ.ಸಿ. ಅಚ್ಚಯ್ಯ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.