ಮಡಿಕೇರಿ, ಜು.೨೬: ಭಾರತ ಸ್ವಾತಂತ್ರö್ಯದ ಅಮೃತ ಮಹೋತ್ಸವ ಆಚರಣೆ ಪ್ರಯುಕ್ತ ‘ಹರ್-ಘರ್-ತಿರಂಗಾ’ ಅಭಿಯಾನವು ಆಗಸ್ಟ್ ೧೩ ರಿಂದ ೧೫ ರವರೆಗೆ ನಡೆಯಲಿದ್ದು, ಈ ಅಭಿಯಾನಕ್ಕೆ ಎಲ್ಲರೂ ಕೈಜೋಡಿ ಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಕೋರಿದ್ದಾರೆ.
ನಗರದ ಜಿ.ಪಂ.ಸಭಾAಗಣದಲ್ಲಿ ಸ್ವಾತಂತ್ರö್ಯದ ಅಮೃತ ಮಹೋತ್ಸವದ ಆಚರಣೆ ಪ್ರಯುಕ್ತ ‘ಹರ್-ಘರ್-ತಿರಂಗಾ’ ಅಭಿಯಾನ ಹಮ್ಮಿಕೊಳ್ಳುವ ಬಗ್ಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮನೆಗಳಲ್ಲಿ, ಸರ್ಕಾರಿ ಕಚೇರಿ ಕಟ್ಟಡಗಳು, ಸರ್ಕಾರೇತರ ಸಂಘ ಸಂಸ್ಥೆಗಳ ಕಟ್ಟಡಗಳ ಮೇಲೆ ರಾಷ್ಟç ಧ್ವಜವನ್ನು ಹಾರಿಸಿ ದೇಶ ಭಕ್ತಿ ಅಭಿಮಾನ ಬಿಂಬಿ ಸುವ ಮೂಲಕ ರಾಷ್ಟç ಪ್ರೇಮವನ್ನು ಅಭಿವ್ಯಕ್ತಗೊಳಿಸ ಬೇಕು ಎಂದು ಮನವಿ ಮಾಡಿದರು.
(ಮೊದಲ ಪುಟದಿಂದ) ರಾಷ್ಟಾçದ್ಯಂತ ಸ್ವಾತಂತ್ರö್ಯದ ೭೫ ರ ಸಂಭ್ರಮವನ್ನು ವೈವಿಧ್ಯಮಯವಾಗಿ ಮತ್ತು ವರ್ಣರಂಜಿತವಾಗಿ ಆಚರಿಸಲಾಗುತ್ತಿದೆ. ಆ ನಿಟ್ಟಿನಲ್ಲಿ ಸರ್ಕಾರ ‘ಹರ್-ಘರ್-ತಿರಂಗಾ’ ಎಂಬ ಘೋಷ ವಾಕ್ಯದೊಂದಿಗೆ ಆಗಸ್ಟ್ ೧೩ ರಿಂದ ೧೫ ರವರೆಗೆ ಎಲ್ಲರೂ ತಮ್ಮ ಮನೆಯ ಅಂಗಳದಲ್ಲಿ ರಾಷ್ಟçಧ್ವಜವನ್ನು ಹಾರಿಸಿ ದೇಶಭಕ್ತಿ, ದೇಶಾಭಿಮಾನ ಬಿಂಬಿಸುವ ಮೂಲಕ ರಾಷ್ಟç ಪ್ರೇಮವನ್ನು ಅಭಿವ್ಯಕ್ತಗೊಳಿಸಬೇಕು ಎಂದು ಡಾ.ಬಿ.ಸಿ.ಸತೀಶ ಅವರು ಕೋರಿದರು.
‘ಹರ್-ಘರ್-ತಿರಂಗಾ’ ಬಗ್ಗೆ ಕರಪತ್ರ ಮುಖಾಂತರ ಸಂತೆಗಳಲ್ಲಿ, ಸ್ಥಳೀಯ ಜಾತ್ರೆ ಸಂದರ್ಭದಲ್ಲಿ ಮಾಹಿತಿ ನೀಡುವುದು, ಸಾರಿಗೆ ವಾಹನಗಳಲ್ಲಿ ಅಭಿಯಾನ ಕುರಿತು ಪ್ರದರ್ಶನ ಮಾಡುವುದು, ಗ್ರಾ.ಪಂ.ಮಟ್ಟದಲ್ಲಿ ಅಭಿಯಾನ ಕುರಿತು ಜಾಗೃತಿ ಮೂಡಿಸುವುದು, ಸರ್ಕಾರದ ಜೊತೆ ಸರ್ಕಾರೇತರ ಸಂಸ್ಥೆಗಳು ಸಹ ಅಭಿಯಾನಕ್ಕೆ ಕೈಜೋಡಿಸಿ ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ರಾಷ್ಟçಭಕ್ತಿ ಗೀತೆಗಳನ್ನು ಏರ್ಪಡಿಸುವುದು. ಜಿಲ್ಲೆಯ ಹೆಸರಾಂತ ಸಾಹಿತಿಗಳು, ಕಲಾವಿದರು, ಕ್ರೀಡಾಪಟುಗಳು ಮತ್ತಿತರ ಕ್ಷೇತ್ರಗಳಲ್ಲಿ ಹೆಸರು ಮಾಡಿದಂತಹ ಮಹನೀಯರ ಹೇಳಿಕೆಗಳನ್ನು ಪಡೆದು ಪ್ರಚಾರ ಮಾಡುವ ಸಲುವಾಗಿ ಈ ಬಗ್ಗೆ ಸಂಬAಧಪಟ್ಟ ಇಲಾಖೆಗಳು ಗಮನಹರಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಸರ್ಕಾರಿ ಕಚೇರಿ ಕಟ್ಟಡಗಳು, ಮನೆಗಳು, ಸರ್ಕಾರೇತರ ಸಂಘ ಸಂಸ್ಥೆಗಳು, ಅಂಗಡಿಗಳು, ವಾಣಿಜ್ಯ ಸಂಕೀರ್ಣಗಳು, ಕೈಗಾರಿಕೆಗಳು, ವಸತಿ ಸಮುಚ್ಛಯಗಳ ಕಟ್ಟಡಗಳ ಮೇಲೆ ರಾಷ್ಟçಧ್ವಜ ಹಾರಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು.
ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಅವರು ಮಾತನಾಡಿ ಎಲ್ಲಾ ಜಿ.ಪಂ., ಗ್ರಾ.ಪಂ. ತಾ.ಪಂ.ಗಳಲ್ಲಿ ಧ್ವಜಾರೋಹಣ ಮಾಡಲಾಗುತ್ತದೆ. ಶಾಲೆಗಳು, ಅಂಗನವಾಡಿಗಳಲ್ಲಿ ಧ್ವಜಾರೋಹಣ ಮಾಡಲಾಗುತ್ತದೆ ಎಂದರು. ಸ್ವಾತಂತ್ರö್ಯ ಅಮೃತ ಮಹೋತ್ಸವ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಹಕರಿಸುವಂತೆ ಕೋರಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ವೇದಮೂರ್ತಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು ಹಾಗೂ ಇತರರು ಇದ್ದರು.