ಮಡಿಕೇರಿ, ಜು.೨೭: ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ಗ್ರಾಮ ಸಂಪರ್ಕ ಅಭಿಯಾನ ಕಾರ್ಯಕ್ರಮಕ್ಕೆ ಭಾಗಮಂಡಲ ಮತ್ತು ನಾಪೋಕ್ಲುವಿನಲ್ಲಿ ಚಾಲನೆ ನೀಡಲಾಯಿತು.
ಭಾಗಮಂಡಲದಲ್ಲಿ ಮಾತನಾಡಿದ ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಸಂಚಾಲಕ ಎಂ.ಕೆ.ಅಪ್ಪಯ್ಯ, ಅಭಿಯಾನಕ್ಕೆ ಸಾರ್ವಜನಿಕರಿಂದ ನಿರೀಕ್ಷೆಗೂ ಮೀರಿ ಉತ್ತಮ ಸ್ಪಂದನ ದೊರೆಯುತ್ತಿದೆ. ಕೊಡಗು ಜಿಲ್ಲೆಯ ಎಲ್ಲಾ ಸಮುದಾಯಗಳ ಜನತೆ ಪರ್ಯಾಯ ರಾಜಕೀಯ ವ್ಯವಸ್ಥೆಯನ್ನು ನಿರೀಕ್ಷಿಸುತ್ತಿದ್ದಾರೆ ಎಂದರು. ಆಮ್ ಆದ್ಮಿ ಪಾರ್ಟಿಯ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಒಲವಿದೆ. ಅಭಿಯಾನದ ಮೂಲಕ ಮತ್ತಷ್ಟು ವಿಚಾರಗಳನ್ನು ಮನವರಿಕೆ ಮಾಡಿಕೊಡಲಾಗುವುದು ಎಂದರು.
ಜಿಲ್ಲಾ ಉಸ್ತುವಾರಿ ಕೋಳಿಬೈಲು ಚಿನ್ನಪ್ಪ ವೆಂಕಟೇಶ್, ಕಾರ್ಯದರ್ಶಿ ಹೆಚ್.ಬಿ.ಪೃಥ್ವಿ, ಮಾಧ್ಯಮ ಉಸ್ತುವಾರಿ ಬೋಜಣ್ಣ, ಸೋಮಯ್ಯ, ಬೆಂಗಳೂರು ಪ್ರತಿನಿಧಿ ಎನ್.ಬಿ.ಉದಯಕುಮಾರ್ ಹಾಗೂ ಪಾರ್ಟಿಯ ಸ್ಥಳೀಯ ಮುಖಂಡರು ಹಾಜರಿದ್ದರು. ಅಭಿಯಾನದಲ್ಲಿ ಒಂದು ಸಾವಿರಕ್ಕೂ ಅಧಿಕ ಜನರನ್ನು ಸಂಪರ್ಕಿಸಿ ಪಕ್ಷದ ಕರಪತ್ರ ವಿತರಿಸಲಾಯಿತು. ನಂತರ ಪಕ್ಷದ ಸಾಧನೆಗಳ ಬಗ್ಗೆ ಜನರಿಗೆ ವಿವರಿಸಲಾಯಿತು.