ಕಡಂಗ, ಜು. ೨೭: ಭಾರೀ ಮಳೆಯಿಂದ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಪಟ್ಟು ಕರಡ ಗ್ರಾಮದ ಸುತ್ತಮುತ್ತಲಿನ ಕಾಫಿ ತೋಟಗಳಲ್ಲಿ ಕಾಫಿ ಪಸಲು ಕೊಳೆರೋಗಕ್ಕೆ ತುತ್ತಾಗಿದ್ದು, ಮಳೆಗಾಲ ಆರಂಭವಾಗಿ ಒಂದೂವರೆ ತಿಂಗಳಲ್ಲೇ ಕಾಫಿ ಪಸಲು ಗಿಡದಿಂದ ಉದುರಲು ಪ್ರಾರಂಭವಾಗಿದೆ. ಹೆಚ್ಚಿನ ಮಳೆ ಆದಲ್ಲಿ ಕಾಫಿ ಬೆಳೆಗೆ ತೀವ್ರ ಹೊಡೆತ ಬೀಳಲಿದೆ ಎಂದು ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಒಂದು ಕಡೆ ಈ ಭಾಗಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು ಅನೇಕ ಕಡೆಗಳಲ್ಲಿ ಬೆಳೆಗಳು ಹಾನಿಯಾಗಿವೆ. ಇದೀಗ ಕಾಫಿ ಫಸಲು ಕೊಳೆ ರೋಗಕ್ಕೆ ತುತ್ತಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೂಡಲೇ ಸರಕಾರವು ಹಾನಿಗೊಳಗಾಗಿರುವ ತೋಟಗಳ ಸಮೀಕ್ಷೆ ನಡೆಸಿ ಬೆಳೆಗಾರರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಗ್ರಾಮ ಪಂಚಾಯತ್ ಸದಸ್ಯ ವಿಲಿನ್ ಬೇಪಾಡಿಯಂಡ ಆಗ್ರಹಿಸಿದ್ದಾರೆ. -ವರದಿ ನೌಫಲ್ ಕಡಂಗ