ಚೆಯ್ಯಂಡಾಣೆ, ಜು. ೨೭: ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿಯ ೨೦೨೧-೨೨ನೇ ಸಾಲಿನ ಎರಡನೇ ಹಂತದ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಯು ತಾ.೩೦ರಂದು ಪೂರ್ವಾಹ್ನ ೧೧ ಗಂಟೆಗೆ ಚೆಯ್ಯಂಡಾಣೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿದ್ದಂಡ ಎಂ. ರಾಜೇಶ್ ಅಚ್ಚಯ್ಯ ಉಪಸ್ಥಿತಿಯಲ್ಲಿ ನಡೆಯಲಿದೆ. ನೋಡಲ್ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ ಪಾಲ್ಗೊಳ್ಳಲಿದ್ದಾರೆ.