ಅರಣ್ಯ ಇಲಾಖೆ ವ್ಯಾಪ್ತಿಯ ೨೫ ಶ್ರೀಗಂಧ ಮರಗಳಿಗೆ ಖದೀಮರ ಕೊಡಲಿ ಪೆಟ್ಟು
ಬೆಂಗಳೂರು, ಜು. ೨೭: ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಅರಣ್ಯ ಇಲಾಖೆಯ, ಹೊಸಕೋಟೆ ತಾಲೂಕಿನ ಗೊಟ್ಟಿಪುರ ವನ ವಿಜ್ಞಾನ ಕೇಂದ್ರದ ಅರಣ್ಯ ಪ್ರದೇಶದಲ್ಲಿರುವ ಅರಣ್ಯೀಕರಣದ ವಿವಿಧ ಮರಗಳನ್ನು ಸಂಶೋಧನೆಗಾಗಿ ಬೆಳೆಸಲಾಗುತ್ತಿದೆ. ಅದರಲ್ಲಿ ಬೆಲೆಬಾಳುವ ೨೫ ಶ್ರೀಗಂಧ ಮರಗಳನ್ನು ರಾತ್ರೋರಾತ್ರಿ ಖದೀಮರು ಕಡಿದು ಪರಾರಿಯಾಗಿದ್ದಾರೆ. ಈ ಅರಣ್ಯ ಪ್ರದೇಶವನ್ನು ಕೇಂದ್ರ ಸರ್ಕಾರದ ಅಧೀನಕ್ಕೆ ಬರುವ ವನ ವಿಜ್ಞಾನ ಕೇಂದ್ರದ ಸಂಶೋಧನೆಗೆ ನೀಡಲಾಗಿದೆ. ಪ್ರದೇಶದಲ್ಲಿ ಶ್ರೀಗಂಧ ಹಾಗೂ ಬಿದಿರು ಮರಗಳನ್ನು ಸಂಶೋಧನೆಗಾಗಿ ಬೆಳೆಸಲಾಗಿದೆ. ೧೦ ವರ್ಷದಿಂದ ಸಂಶೋಧನೆಗಾಗಿ ಸಾವಿರಾರು ಶ್ರೀಗಂಧ ಮರಗಳನ್ನು ನೆಟ್ಟು ಪೋಷಣೆ ಮಾಡಲಾಗುತ್ತಿದೆ. ಆದರೆ ರಾತ್ರೋರಾತ್ರಿ ನೂರಾರು ಶ್ರೀಗಂಧ ಮರಗಳಿಗೆ ಖದೀಮರು ಕೊಡಲಿಪೆಟ್ಟು ಹಾಕಿದ್ದಾರೆ. ಈ ಖದೀಮರಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಅರಣ್ಯ ಪ್ರದೇಶವನ್ನು ರಕ್ಷಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ, ಅಪರಾಧಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ.
ನೀರಿನ ಸಂಪ್‌ನಲ್ಲಿ ಬಚ್ಚಿಟ್ಟಿದ್ದ ರಕ್ತ ಚಂದನ ವಶ
ಬೆಂಗಳೂರು, ಜು. ೨೮: ಫಾರ್ಮ್ಹೌಸ್‌ನ ನೀರಿನ ಸಂಪ್‌ನಲ್ಲಿ ಶೇಖರಿಸಿಡಲಾಗಿದ್ದ ಸುಮಾರು ರೂ. ೨.೬೮ ಕೋಟಿ ಮೌಲ್ಯದ ಸಾವಿರಾರು ಕೆ.ಜಿ. ರಕ್ತಚಂದನ ತುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಹೆಸರಘಟ್ಟದಲ್ಲಿ ಖಚಿತ ಮಾಹಿತಿಯನ್ನಾಧರಿಸಿ ದಾಳಿ ನಡೆಸಿದ ಪಶ್ಚಿಮ ವಿಭಾಗದ ಪೊಲೀಸರು ಫಾರ್ಮ್ ಹೌಸ್ ನ ನೀರಿನ ಸಂಪ್ ನಲ್ಲಿ ಶೇಖರಿಸಿಡಲಾಗಿದ್ದ ಸುಮಾರು ರೂ. ೨.೬೮ ಕೋಟಿ ಮೌಲ್ಯದ ೧೬೯೩ ಕೆ.ಜಿ. ರಕ್ತ ಚಂದನವನ್ನು ವಶ ಪಡಿಸಿಕೊಂಡಿದ್ದಾರೆ. ಅಂತೆಯೇ ಈ ವೇಳೆ ತಮಿಳುನಾಡು ಮೂಲದ ವಿನೋದ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಅರೋಪಿಯನ್ನು ಬ್ಯಾಟರಾಯನಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿ ವಿನೋದ್ ಹೆಸರಘಟ್ಟದ ಫಾರ್ಮ್ ಹೌಸ್‌ನಲ್ಲಿ ಕಳೆದ ೧೫ ದಿನಗಳಿಂದ ಕೆಲಸ ಮಾಡುತ್ತಿದ್ದ. ಜುಲೈ ೨೨ ರಂದು ವಿನೋದ್ ಹಾಗೂ ಅಜಯ್ ಎಂಬುವರು ಸ್ಯಾಟ್‌ಲೈಟ್ ಬಸ್ ನಿಲ್ದಾಣದ ನ್ಯೂ ಟಿಂಬರ್ ಲೇಔಟ್‌ನಲ್ಲಿ ೧೧೩ ಕೆ.ಜಿ. ಮೌಲ್ಯದ ರಕ್ತ ಚಂದನವನ್ನು ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಇನ್ಸ್ ಸ್ಪೆಕ್ಟರ್ ಶಂಕರ್ ನಾಯಕ್ ನೇತೃತ್ವದ ತಂಡ ಇಬ್ಬರು ಆರೋಪಿಗಳ ಪೈಕಿ ವಿನೋದ್‌ನನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ಹೆಸರಘಟ್ಟದ ಫಾರ್ಮ್ ಹೌಸ್ ನಲ್ಲಿ ನೀರಿಲ್ಲದ ಸಂಪ್ ನಲ್ಲಿ ಬಚ್ಚಿಟ್ಟಿದ್ದ ಒಟ್ಟು ೨.೬೮ ಕೋಟಿ ಮೌಲ್ಯದ ೧೬೯೩ ರಕ್ತಚಂದನ ಜಪ್ತಿ ಮಾಡಲಾಗಿದೆ.
ಶೇ. ೫೦ ರ ಮಿತಿ ಮೇಲೆ ಪರಿಣಾಮ ಬೀರುವುದಿಲ್ಲ: ಕೇಂದ್ರ
ನವದೆಹಲಿ, ಜು. ೨೭: ಕೇಂದ್ರ ಸಶಸ್ತç ಪೊಲೀಸ್ ಪಡೆಗಳ ಕಾನ್‌ಸ್ಟೆಬಲ್ ನೇಮಕಾತಿಯಲ್ಲಿ ಅಗ್ನಿವೀರರಿಗೆ ನೀಡಲಾಗುವ ಶೇ. ೧೦ ರಷ್ಟು ಮೀಸಲಾತಿಯು ಸುಪ್ರೀಂ ಕೋರ್ಟ್ ಮಿತಿಗೊಳಿಸಿರುವ ಶೇ. ೫೦ ರಷ್ಟು ಮೀಸಲಾತಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಗೆ ತಿಳಿಸಿದೆ. ಮೀಸಲಾತಿ ಪ್ರಮಾಣ ಶೇ. ೫೦ ರಷ್ಟು ಮೀರಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಸಂಬAದ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು, ಕಾನ್ಸ್ಟೇಬಲ್ (ಜನರಲ್ ಡ್ಯೂಟಿ), ಕೇಂದ್ರ ಸಶಸ್ತç ಪೊಲೀಸ್ ಪಡೆಗಳಲ್ಲಿ ರೈಫಲ್‌ಮ್ಯಾನ್ ಮತ್ತು ಅಸ್ಸಾಂ ರೈಫಲ್ಸ್ನ ನೇಮಕಾತಿಯಲ್ಲಿ ಮಾಜಿ ಅಗ್ನಿವೀರರಿಗೆ ಶೇ. ೧೦ ರಷ್ಟು ಮೀಸಲಾತಿಗೆ ತಾತ್ವಿಕ ಅನುಮೋದನೆ ನೀಡಲಾಗಿದೆ. ಈ ಮೀಸಲಾತಿಯು ಸಮತಲವಾಗಿರುತ್ತದೆ. ಇದು ಸುಪ್ರೀಂ ಕೋರ್ಟ್ ಮಿತಿಗೊಳಿಸಿರುವ ಶೇ. ೫೦ ರಷ್ಟು ಮೀಸಲಾತಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅವರು ಹೇಳಿದರು. ಮಾಜಿ ಅಗ್ನಿವೀರರಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುವುದು ಎಂದು ರೈ ಹೇಳಿದರು. ಜೂನ್ ೧೪ ರಂದು ಕೇಂದ್ರ ಸರ್ಕಾರ ೧೭ ರಿಂದ ೨೧ ವರ್ಷ ವಯಸ್ಸಿನ ಯುವಕರನ್ನು ಸೇನೆ, ನೌಕಾಪಡೆ ಮತ್ತು ವಾಯುಪಡೆಗಳಲ್ಲಿ ನಾಲ್ಕು ವರ್ಷಗಳ ಅಲ್ಪಾವಧಿಗೆ ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವ ಮಹತ್ವಾಕಾಂಕ್ಷೆಯ ಅಗ್ನಿಪಥ್ ಯೋಜನೆಗೆ ಚಾಲನೆ ನೀಡಿದೆ.
ಭಾರತ-ಪಾಕ್ ಗಡಿಯಲ್ಲಿ ಬಿಎಸ್‌ಎಫ್‌ನಿಂದ ೪.೭ ಕೆ.ಜಿ. ಡ್ರಗ್ಸ್ ಜಪ್ತಿ
ಜೈಪುರ, ಜು. ೨೭: ರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿ ಬಳಿ ೪.೭ ಕೆ.ಜಿ. ಡ್ರಗ್ಸ್ ಇದ್ದ ಐದು ಪ್ಯಾಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗಡಿ ಭದ್ರತಾ ಪಡೆ ಮೂಲಗಳು ಬುಧವಾರ ತಿಳಿಸಿವೆ. ಪ್ಯಾಕೆಟ್‌ಗಳು ಪತ್ತೆಯಾದ ಕರಣ್‌ಪುರದ ಸ್ಥಳದಿಂದ ಭಾರತ-ಪಾಕ್ ಗಡಿ ಸುಮಾರು ೨೦೦ ಮೀಟರ್ ದೂರದಲ್ಲಿದೆ. ಈ ಮೊದಲು, ಗಡಿಯಾಚೆಯಿಂದ ಡ್ರೋನ್ ಮೂಲಕ ಪ್ಯಾಕೆಟ್‌ಗಳನ್ನು ಕೆಳಗೆ ಬೀಳಿಸಲಾಗಿದೆ ಎಂದು ಶಂಕಿಸಲಾಗಿತ್ತು. ನಂತರ, ಮಂಗಳವಾರ ಮತ್ತು ಬುಧವಾರದ ಮಧ್ಯರಾತ್ರಿ ಕರಣ್‌ಪುರದ ಕೆಲವು ಸ್ಥಳೀಯರು ಪ್ಯಾಕೆಟ್‌ಗಳನ್ನು ಈ ಎಸೆದಿದ್ದಾರೆ ಎಂಬುದು ಸ್ಪಷ್ಟವಾಯಿತು ಎಂದು ಬಿಎಸ್‌ಎಫ್ ಮೂಲಗಳು ತಿಳಿಸಿವೆ. ಬಿಎಸ್‌ಪಿ ಪಡೆಗಳು ಸ್ಥಳಕ್ಕಾಗಮಿಸಿದ ನಂತರ ಕೆಲವು ಅನುಮಾನಾಸ್ಪದ ಚಲನವಲನ ಗಮನಿಸಿ ಗುಂಡಿನ ದಾಳಿ ನಡೆಸಿದರು. ಆದರೆ, ಆರೋಪಿಗಳು ಪರಾರಿಯಾಗಿದ್ದಾರೆ.
ಶೇ. ೫೦ ರಷ್ಟು ವಿಮಾನ ಕಾರ್ಯ ನಿರ್ವಹಿಸುವಂತೆ ಡಿಜಿಸಿಎ ಆದೇಶ
ನವದೆಹಲಿ, ಜು. ೨೭: ತಾಂತ್ರಿಕ ದೋಷ ಕಾರಣದಿಂದಾಗಿ ಪದೇ ಪದೇ ತುರ್ತು ಭೂಸ್ಪರ್ಶ ಮಾಡುತ್ತಿದ್ದ ಸ್ಪೆöÊಸ್‌ಜೆಟ್ ಏರ್‌ಲೈನ್ಸ್ಗೆ ೮ ವಾರಗಳವರೆಗೆ ಶೇ. ೫೦ರಷ್ಟು ವಿಮಾನಗಳನ್ನು ಮಾತ್ರ ಕಾರ್ಯನಿರ್ವಹಿಸುವಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಬುಧವಾರ ಆದೇಶಿಸಿದೆ. ಜೂನ್ ೧೯ ರಿಂದ ಕನಿಷ್ಟ ಎಂಟು ಬಾರಿ ತಾಂತ್ರಿಕ ದೋಷ ಘಟನೆಗಳು ವರದಿಯಾದ ನಂತರ ಜುಲೈ ೬ ರಂದು ಡಿಜಿಸಿಎ ಸ್ಪೆöÊಸ್‌ಜೆಟ್‌ಗೆ ಶೋಕಾಸ್ ನೋಟಿಸ್ ನೀಡಿತ್ತು. ವಿವಿಧ ಸ್ಪಾಟ್ ಚೆಕ್‌ಗಳು ಮತ್ತು ತಪಾಸಣೆಗಳ ಕುರಿತು ಸ್ಪೆöÊಸ್‌ಜೆಟ್ ನೋಟಿಸ್‌ಗೆ ಉತ್ತರ ಸಲ್ಲಿಸಿದ ನಂತರ ಸುರಕ್ಷಿತ ಮತ್ತು ವಿಶ್ವಾಸಾರ್ಹ ವಾಯು ಸಾರಿಗೆ ಸೇವೆಗಾಗಿ ಸ್ಪೆöÊಸ್‌ಜೆಟ್‌ನ ವಿಮಾನ ಹಾರಾಟ ಸಂಖ್ಯೆಯನ್ನು ಶೇ.೫೦ಕ್ಕೆ ನಿರ್ಬಂಧಿಸಲಾಗಿದೆ. ಇದನ್ನು ೮ ವಾರಗಳ ಅವಧಿಗೆ ಅನುಮೋದನೆ ನೀಡಲಾಗಿದೆ ಎಂದು ಡಿಜಿಸಿಎ ಆದೇಶದಲ್ಲಿ ತಿಳಿಸಿದೆ.