ಮಡಿಕೇರಿ, ಜು.೨೭: ದೇಶದ ಜನಸಾಮಾನ್ಯರಿಗೆ ಹೊರೆಯಾಗಿರುವ ಜಿಎಸ್‌ಟಿ ಏರಿಕೆಯನ್ನು ನಿಯಂತ್ರಿಸ ಬೇಕೆಂದು ಒತ್ತಾಯಿಸಿ ಮಡಿಕೇರಿ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಜಿಲ್ಲಾಡಳಿತದ ಮೂಲಕ ರಾಷ್ಟçಪತಿಗಳಿಗೆ ಮನವಿ ಪತ್ರ ಸಲ್ಲಿಸಿತು.

ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ.ಪೀಟರ್ ಅವರ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ ಅವರಿಗೆ ಮನವಿ ಪತ್ರ ಸಲ್ಲಿಸಿದ ಪ್ರಮುಖರು ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿದರು.

ಪೀಟರ್ ಮಾತನಾಡಿ ತೈಲೋತ್ಪನ್ನಗಳ ಬೆಲೆ ಏರಿಕೆಯೊಂದಿಗೆ ನಿತ್ಯ ಬಳಕೆಯ ವಸ್ತುಗಳ ಬೆಲೆಯು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ನಡುವೆ ಕೇಂದ್ರ ಸರಕಾರ ಜಿಎಸ್‌ಟಿಯನ್ನು ಶೇ.೫ರಷ್ಟು ಏರಿಕೆ ಮಾಡಿರುವುದರಿಂದ ಹಿಟ್ಟು, ಸಕ್ಕರೆ, ಅಕ್ಕಿ, ಪನ್ನೀರ್, ಮೊಸರು ಸೇರಿದಂತೆ ಹಲವು ಆಹಾರ ಪದಾರ್ಥಗಳ ಬೆಲೆ ದುಬಾರಿಯಾಗಿದೆ ಎಂದರು.

ಅಲ್ಪಸAಖ್ಯಾತರ ಘಟಕದ ಮಡಿಕೇರಿ ಬ್ಲಾಕ್ ಅಧ್ಯಕ್ಷ ಎಂ.ಎ. ಖಲೀಲ್ ಬಾಷ, ಮಡಿಕೇರಿ ನಗರ ಕಾರ್ಯದರ್ಶಿ ಎಂ.ಎ. ಫಯಾಜ್, ಉಪಾಧ್ಯಕ್ಷ ಎಂ.ಹೆಚ್. ಶೌಖತ್ ಆಲಿ ಹಾಗೂ ಸದಸ್ಯ ಎಂ.ಎ. ಅಶ್ರಫ್ ಮನವಿ ಪತ್ರ ಸಲ್ಲಿಸುವ ಸಂದರ್ಭ ಹಾಜರಿದ್ದರು.