ಮಡಿಕೇರಿ, ಜು. ೨೭: ಹಾಕತ್ತೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶೇಷ ಘಟಕ ಯೋಜನೆಯಡಿಯಲ್ಲಿ ಯು.ಡಿ.ಚಂದ್ರಪ್ಪ ಮತ್ತು ತಂಡದವರಿAದ ಮಂಗಳವಾರ ನಾಡು ನುಡಿ ಕುರಿತು ಸಂಗೀತ ಕಾರ್ಯಕ್ರಮ ನಡೆಯಿತು.
ಶಾಲಾ ಮುಖ್ಯ ಶಿಕ್ಷಕರಾದ ಸ್ವಾಮಿ ಅವರು ಮಾತನಾಡಿ ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಹೆಚ್ಚು ಹಮ್ಮಿಕೊಂಡು ಕಲೆ, ಸಂಸ್ಕೃತಿಗೆ ಹೆಚ್ಚಿನ ಆದ್ಯತೆ ನೀಡುವಂತಾಗಬೇಕು ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ಸಾರ್ವಜನಿಕರು ಇತರರು ಇದ್ದರು.