ಮಡಿಕೇರಿ, ಜು. ೨೭: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ ೬ ಸಾವಿರ ರೂ ಗಳನ್ನು ಪ್ರತಿ ೪ ತಿಂಗಳಿಗೊಮ್ಮೆಯAತೆ ಒಟ್ಟು ೩ ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ.
ಜಿಲ್ಲೆಯ ಸುಮಾರು ೪೯,೫೮೨ ಜನ ನೋಂದಣಿಯಾಗಿದ್ದು, ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆ ಚಾಲ್ತಿಯಲ್ಲಿದೆ. ಈ ಯೋಜನೆಯ ನೆರವು ಅರ್ಹ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳಲು ಇ-ಕೆವೈಸಿ ಮಾಡುವುದು ಅತ್ಯಂತ ಅವಶ್ಯಕವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬನಾ ಎಂ.ಷೇಕ್ ಅವರು ತಿಳಿಸಿದ್ದಾರೆ.
ಇ-ಕೆವೈಸಿ ಅನ್ನು ಎರಡು ವಿಧಾನಗಳಲ್ಲಿ ಕೈಗೊಳ್ಳಬಹುದಾಗಿದೆ. ರೈತರು hಣಣಠಿ://ಠಿmಞisಚಿಟಿ.gov.iಟಿ ಪೋರ್ಟಲ್‌ನ ಪಾಮರ‍್ಸ್ ಕಾರ್ನರ್‌ನ ಇ-ಕೆವೈಸಿ ಅವಕಾಶದಡಿ ರೈತನ(ಈಗಾಗಲೇ ಪಿಎಂಕಿಸಾನ್ ಯೋಜನೆಯಡಿ ಫಲಾನುಭವಿಗಳಾಗಿರುವ ಪ್ರತಿಯೊಬ್ಬ) ಆಧಾರ್ ಸಂಖ್ಯೆಯನ್ನು ನಂತರ ಆಧಾರ್ ಸಂಖ್ಯೆಯೊAದಿಗೆ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು. ನಂತರ ಮೊಬೈಲ್‌ಗೆ ಒಟಿಪಿ ಯು ರವಾನೆಯಾಗುತ್ತದೆ. ಹೀಗೆ ಸ್ವೀಕರಿಸಿದ ಒಟಿಪಿಯನ್ನು ಪೋರ್ಟಲ್‌ನಲ್ಲಿ ದಾಖಲಿಸಿ “ಸಬ್‌ಮಿಟ್ ಫಾರ್ ಆಥ್ (SUಃಒIಖಿ ಈಔಖ ಂUಖಿಊ) ಎಂಬ ಬಟನ್ ಒತ್ತಬೇಕು. ಆಗ ತಂತ್ರಾAಶ ಆಧಾರಿತ ಪರಿಶೀಲನೆ ನಡೆದು
e-ಏಙಅ is “suಛಿಛಿessಜಿuಟಟಥಿ submiಣಣeಜ” ಎಂಬ ವಾಕ್ಯವು ಗೋಚರಿಸುತ್ತದೆ. ಹೀಗೆ ಮೊಬೈಲ್ ಒಟಿಪಿ ಆಧಾರಿತವಾಗಿ ಫಲಾನುಭವಿಯು ಖುದ್ದಾಗಿ ಇ-ಕೆವೈಸಿ ಮಾಡಬಹುದಾಗಿದೆ. (ಈಗಾಗಲೇ ಇ-ಕೆವೈಸಿ ಆಗಿದ್ದರೆ. “e-ಏಙಅ ಚಿಟಡಿeಚಿಜಥಿ ಜoಟಿe” ಎಂಬ ಮಾಹಿತಿ ಗೋಚರಿಸುತ್ತದೆ). ಯಾವ ಫಲಾನುಭವಿಯು ಮೊಬೈಲ್ ಸಂಖ್ಯೆ ಆಧಾರ್ ಸಂಖ್ಯೆಯೊAದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾರ ಮೊಬೈಲ್ ಸಂಖ್ಯೆಗೆ ಇ-ಕೆವೈಸಿಗಾಗಿ ಕಳುಹಿಸಿದ ಒಟಿಪಿಯು ಸ್ವೀಕೃತವಾಗುದಿಲ್ಲವೋ ಅವರು ಸಿಎಸ್‌ಸಿ (ಸಿಟಿಜನ್ ಸರ್ವಿಸ್ ಸೆಂರ‍್ಸ್) ನಾಗರಿಕ ಸೇವಾ ಕೇಂದ್ರಗಳಿಗೆ ತೆರಳಿ ಅಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿ ಮಾಡಬಹುದಾಗಿದೆ. ಅಲ್ಲಿ ಕೈಬೆರಳಿನ ಗುರುತು ಆಧಾರದ ಮೇಲೆ ಇ-ಕೆವೈಸಿ ಮಾಡಬಹುದಾಗಿದೆ.
ಈ ಯೋಜನೆಯ ಪ್ರತಿ ಫಲಾನುಭವಿ ರೈತರು, ಕೇಂದ್ರ ಸರ್ಕಾರವು ಮುಂದಿನ ಕಂತಿನಲ್ಲಿ ನೀಡುವ ಆರ್ಥಿಕ ನೆರವು ಪಡೆಯಲು ಜುಲೈ, ೩೧ ರೊಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗೆ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ನಾಗರಿಕ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.